ನೋಂದಣಿಗೆ ಆಹ್ವಾನ

Published on

ಬಳ್ಳಾರಿ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನಾನಾ ಟೂಲ್ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಸೆ. 27 ಕೊನೆಯ ದಿನವಾಗಿದ್ದು, ಅರ್ಹ ಕಟ್ಟಡ ಕಾರ್ಮಿಕರು ಆಯಾ ಕಾರ್ಮಿಕ ನಿರೀಕ್ಷರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಸಿದ್ದಪ್ಪ ಖೈನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಆಯಾ ತಾಲೂಕಿನ ಕಾರ್ಮಿಕರ ನಿರೀಕ್ಷಕರ ಕಚೇರಿ ಹಾಗೂ ಜಿಲ್ಲಾ ಉಪವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net