ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ

bkt-10-15
ಬಾಗಲಕೋಟೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಬುಧವಾರ ಸಚಿವ ಆರ್.ಬಿ.ತಿಮ್ಮಾಪುರ ಅವರಿಗೆ ಜಿಲ್ಲಾಡಳಿತ ಭವನದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಕಾರ್ಯದರ್ಶಿ ಎಸ್.ವಿ.ಸತ್ಯರಡ್ಡಿ, ಜಿಲ್ಲಾ ಕಾರ್ಯದರ್ಶಿ ವಿಠ್ಠಲ ಎಲ್. ವಾಲಿಕಾರ ಇತರರು ಇದ್ದರು.
Published on

ಬಾಗಲಕೋಟೆ: ರಾಜ್ಯದ ೭ನೇ ವೇತನ ಆಯೋಗದ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಯತಾವತ್ತಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಬುಧವಾರ ಸಚಿವ ಆರ್.ಬಿ.ತಿಮ್ಮಾಪುರ ಅವರಿಗೆ ಜಿಲ್ಲಾಡಳಿತ ಭವನದಲ್ಲಿ ಮನವಿ ಸಲ್ಲಿಸಲಾಯಿತು.

ಏಳನೇ ವೇತನ ಆಯೋಗ ಜಾರಿಗೊಳಿಸಬೇಕು, ಎನ್‌ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೊಳಿಸಬೇಕು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು. ನೌಕರರ ಬೇಡಿಕೆ ವಿಷಯದಲ್ಲಿ ತಾರತಮ್ಯ ಮಾಡಬಾರದು. ನ್ಯಾಯಯುತ ಬೇಡಿಕೆ ಇದ್ದು, ಶೀಘ್ರಗತಿಯಲ್ಲಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಕಾರ್ಯದರ್ಶಿ ಎಸ್.ವಿ.ಸತ್ಯರಡ್ಡಿ, ಜಿಲ್ಲಾ ಕಾರ್ಯದರ್ಶಿ ವಿಠ್ಠಲ ಎಲ್. ವಾಲಿಕಾರ, ಜಿಲ್ಲಾ ಖಜಾಂಚಿ ಗೋಪಾಲ ಎನ್. ನೀಲನಾಯ್ಕ, ಗೌರವಾಧ್ಯಕ್ಷ ಸುರೇಶ ಎಸ್. ಇಂಜಗನೇರಿ, ಮುಖಂಡರಾದ ರಮೇಶ ಚವ್ಹಾಣ, ಹನಮಂತ ಆರ್. ಜಾನನ್ನವರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net