ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ಪ್ರಯತ್ನ

21blk2
 ಭಾಲ್ಕಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ, ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ್(ಚಿದ್ರಿ) ಮಾತನಾಡಿದರು. ತಾಪಂ ಇಒ ಸೂರ್ಯಕಾಂತ ಬಿರಾದಾರ್, ಚಂದ್ರಶೇಖರ ಬನ್ನಾಳೆ ಇತರರಿದ್ದರು.
Published on

ಭಾಲ್ಕಿ: ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಂಘ ಬಲಪಡಿಸುವುದರ ಜತೆಗೆ ನ್ಯಾಯುತ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸೋಮಶೇಖರ ಬಿರಾದಾರ್(ಚಿದ್ರಿ) ಹೇಳಿದರು.

ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರಿಗೆ ವಿವಿಧ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲರ ಸಹಕಾರದೊಂದಿಗೆ ಸಂಘಟನೆ ಮೂಲಕ ಸರ್ಕಾರದ ಗಮನ ಸೆಳೆದು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.

ಜಿಲ್ಲಾ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ ಮಾತನಾಡಿ, ಸರ್ಕಾರಿ ನೌಕರರ ಬಲಪಡಿಸಲು ಎಲ್ಲರೂ ಶಕ್ತಿ ತುಂಬಬೇಕು ಎಂದು ಹೇಳಿದರು.

ಜಿಲ್ಲಾ ಖಜಾಂಚಿ ದೇವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತುಗಾವೆ ಮಾತನಾಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಬನ್ನಾಳೆ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಪರಿಷತ್ ಸದಸ್ಯ ಬಸವರಾಜ ಬಂಗಾರೆ, ಖಜಾಂಚಿ ಸುನೀಲ ಬಿರಾದಾರ್, ನಿರ್ದೇಶಕರಾದ ನಿರಂಜಪ್ಪ ಪಾತ್ರೆ, ಶಿವಕುಮಾರ ಫುಲಾರಿ, ಧನರಾಜ ಮೇತ್ರೆ, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಲ್ಮಂಡಗೆ, ಸೋಮನಾಥ ತರನಳ್ಳಿ, ರಮೇಶ ಬೋಗಾರ, ದತ್ತಾತ್ರಿ ಕಾಟಕರ್, ಭೀಮಣ್ಣ ಕೊಂಕಣೆ, ಉತ್ತಮ ಶಿಂಧೆ ಇತರರಿದ್ದರು. ಕುಪೇಂದ್ರ ಜಗ್ಗಶೆಟ್ಟೆ ನಿರೂಪಣೆ ಮಾಡಿದರು. ಪ್ರಭು ಡಿಗ್ಗೆ ವಂದಿಸಿದರು.

ಅಧಿಕಾರ ಹಸ್ತಾಂತರ: ತಾಲೂಕು ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜಪ್ಪ ಪಾಟೀಲ್ ಅವರು ನೂತನ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ ಅವರಿಗೆ ಸಂಘದ ಪುಸ್ತಕ ನೀಡಿ ಅಧಿಕಾರ ಹಸ್ತಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net