ನೌಕರರ ಸಂಘದ ಉದ್ಘಾಟನೆ 5ರಂದು

oppo_2
oppo_2
Published on

ಕಲಬುರಗಿ: ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಲಯ ಮಟ್ಟದ ಸಮಾವೇಶ ಡಿ.೫ರಂದು ಬೆಳಗ್ಗೆ ೧೧ಕ್ಕೆ ನಗರದ ಸೆಂಟ್ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಂಡಯ್ಯ ಎಸ್.ಸ್ವಾಮಿ ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಚಂದ್ರಶೇಖರ ಪಾಟೀಲ್, ಸಂಘದ ರಾಜ್ಯಾಧ್ಯಕ್ಷ ಎನ್.ಹರೀಶ, ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶಿವಶರಣಪ್ಪ ಮುಳೆಗಾಂವ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಶೋಕ ಶಾಸಿ, ಚಂದ್ರಕಾAತ ಶಾಬಾದಕರ್, ಸಂಘದ ಕಾರ್ಯಾಧ್ಯಕ್ಷ ಎಂ.ಎಸ್.ಆನAದಕರ, ಸೇಂಟ್ ಮೇರಿ ಪ.ಪೂ.ಕಾಲೇಜಿನ ಪ್ರಾಚಾರ್ಯ Áದರ್ ಜೋಸೆï ಪ್ರವೀಣ ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮಾವೇಶದಲ್ಲಿ ನೌಕರರ ವಿವಿಧ ಬೇಡಿಕೆ ಕುರಿತು ಚರ್ಚಿಸಲಾಗುವುದು. ನೌಕರರ ಕಾರ್ಯಭಾರ, ವಿದ್ಯಾರ್ಥಿಗಳ ಸಂಖ್ಯೆ ನಿಗದಿ, ಸರ್ಕಾರಿ ಸೌಲಭ್ಯಗಳು, ಜ್ಯೋತಿ ಸಂಜೀವಿನಿ ಒದಗಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿ, ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದರು. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಯ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದರು.

ಸAಘದ ಜಿಲ್ಲಾಧ್ಯಕ್ಷ ಶಿವರಾಜ ನಂದಗಾAವ, ಕಾರ್ಯಾಧ್ಯಕ್ಷ ಲಕ್ಷಿö್ಮಕಾಂತ ಹಿರೇಗೌಡ, ಉಪಾಧ್ಯಕ್ಷ ಅನಂತ ಬಿ.ರಾಜಾಪುರ, ಎಂ.ವೀರಣ್ಣಗೌಡ, ಮಲ್ಲಿಕಾರ್ಜುನ ಅನಂತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net