

ಎನ್.ಆರ್.ಪುರ: ಸರ್ಕಾರಿ ನೌಕರರು ಪ್ರಾಮಾಣಿಕತೆ, ಬದ್ಧತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಕಿವಿಮಾತು ಹೇಳಿದರು.
ಶುಕ್ರವಾರ ಬಾಸಾಪುರದ ಶಾಸಕರ ನಿವಾಸದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಘ ಸ್ಪಂದಿಸಬೇಕು. ಅವರ ಸಮಸ್ಯೆಗಳನ್ನು ಕೇಳಿ ಪರಿಹಾರ ರೂಪಿಸುವತ್ತ ಗಮನ ನೀಡಬೇಕು. ಸಮಸ್ಯೆಗಳನ್ನು ನನ್ನ ಹತ್ತಿರ ಹೇಳಿದರೂ ಪ್ರಾಮಾಣಿಕವಾಗಿ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ. ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತದೆ. ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ಸಂಘದ ರಾಜ್ಯ ಪರಿಷತ್ ಸದಸ್ಯ ಸುಭಾಷ್, ಬಿ.ಟಿ.ಪ್ರಕಾಶ್ ಹಾಗೂ ನಿರ್ದೇಶಕರನ್ನು ಶಾಸಕರು ಅಭಿನಂದಿಸಿದರು.