ನ್ಯಾ. ನಾಗಮೋಹನ ದಾಸ್ ಆಯೋಗದ ವರದಿ ಜಾರಿಗೊಳಿಸಿ

11Jaggu7
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ., ಎಸ್.ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ನೇತೃತ್ವದಲ್ಲಿ ಬೆಳಗಾವಿ ಅಂಬೇಡ್ಕರ್ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಯಿತು.
Published on

ಬೆಳಗಾವಿ: ನ್ಯಾ. ನಾಗಮೋಹನ ದಾಸ್ ಆಯೋಗದ ವರದಿ ಜಾರಿಗೊಳಿಸುವುದು, ಎಸ್.ಎಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ., ಎಸ್.ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.

ನಗರದ ಡಾ. ಅಂಬೇಡ್ಕರ್ ಉದ್ಯಾನದಿಂದ ಪ್ರತಿಭಟನೆ ಆರಂಭಿಸಿದ ಪದಾಧಿಕಾರಿಗಳು, ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದರು. ನ್ಯಾ.ನಾಗಮೋಹನದಾಸ ಆಯೋಗದ ವರದಿ ಶಿಫಾರಸಿನ ಪ್ರಕಾರ ಎಸ್.ಸಿ.ಗೆ ಶೇ.17 ಹಾಗೂ ಎಸ್.ಟಿ.ಗೆ ಶೇ.7 ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು. ನ್ಯಾ.ಸುಭಾಷ ಆಡಿ ಸಮಿತಿಗೆ ವಹಿಸಲಾಗಿರುವ ನ್ಯಾ. ನಾಗಮೋಹನ ದಾಸ್ ವರದಿಯನ್ನು ಕೂಡಲೇ ಹಿಂಪಡೆಯುವುದರ ಜತೆಗೆ ವಿಳಂಬ ಮಾಡದೆ ನೇರವಾಗಿ ಅನುಷ್ಠಾನಗೊಳಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಬೇಕು. ಮನೆ ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು. ಸಮುದಾಯವರಿಗೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಎಂ. ಗೋಪಿನಾಥ, ರಾಜಶೇಖರ ತಳವಾರ, ಮಲ್ಲೇಶ ಚೌಗುಲೆ, ಮಹಾದೇವ ತಳವಾರ, ಸುರೇಶ ಗವನ್ನವರ, ಸಂಜಯ್ ನಾಯಕ, ವಿಜಯ ತಳವಾರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net