ನ್ಯಾಯಮೂರ್ತಿ ಮೇಲೆ ಶೂ ಎಸೆದವರ ವಿರುದ್ಧ ರಾಷ್ಟçದ್ರೋಹ ಪ್ರಕರಣ ದಾಖಲಿಸಿ

15 ckm 7
ಚಿಕ್ಕಮಗಳೂರು ಡಿಸಿ ಮೀನಾ ನಾಗರಾಜ್ ಅವರ ಮೂಲಕ ರಾಷ್ಟçಪತಿಗೆ ಮನವಿ ಸಲ್ಲಿಸಿದ ಡಿಎಸ್‌ಎಸ್ ಮುಖಂಡರು ಸುಪ್ರೀಂ ಕೋಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನ ವಿರುದ್ಧ ರಾಷ್ಟçದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು. ಶ್ರೀಕಾಂತ್, ಡಿ.ರಾಮು, ವೈ.ಆರ್.ರವಿಶಂಕರ್, ಆರ್.ಪವಿತ್ರಾ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಳೆ ಶೂ ಎಸೆದಿರುವ ವಕೀಲನ ವಿರುದ್ಧ ರಾಷ್ಟçದ್ರೋಹ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರ ಮೂಲಕ ರಾಷ್ಟçಪತಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್, ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣ ಖಂಡನೀಯ. ಈ ಕೃತ್ಯವನ್ನು ಧರ್ಮಬೇಧ ಮತ್ತು ಪಕ್ಷಬೇಧ ಮರೆತು ಪ್ರತಿಯೊಬ್ಬರು ಖಂಡನೆ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಗವಾಯಿ ಅವರನ್ನು ಮನುವಾದಿ ವ್ಯಕ್ತಿತ್ವವುಳ್ಳ ವಕೀಲರು ಅವಮಾನಿಸಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಆದ್ದರಿಂದ ಆತನ ವಕೀಲತ್ವವನ್ನು ವಜಾಗೊಳಿಸಿ, ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದರು.

ಸನಾತನಿ ವಕೀಲನು ಎಸಗಿದ ಕೃತ್ಯದಿಂದ ಇಡಿ ಪ್ರಜಾಪ್ರಭುತ್ವ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ವಕೀಲ ಸನಾತನ ಧರ್ಮದ ಬಗ್ಗೆ ಜೈಕಾರ ಕೂಗಿರುವುದನ್ನು ಗಮನಿಸಿದರೆ ನ್ಯಾಯಾಂಗ ವ್ಯವಸ್ಥೆಯನ್ನು ಯಾವುದೋ ಒಂದು ಧರ್ಮಕ್ಕೆ ಬಳಸಿಕೊಳ್ಳುವ ಹುನ್ನಾರ ಅಡಗಿದೆ ಎಂದು ಆಪಾದಿಸಿದರು.

ಈ ಕೃತ್ಯವೆಸಗಿದವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವ ಮೂಲಕ ಭಾರತದ ಸಂವಿಧಾನದಡಿಯಲ್ಲಿ ನ್ಯಾಯಾಂಗ ವ್ಯವಸ್ಥೆಗಳು ನಿರ್ಭೀತಿಯಿಂದ ಕಾರ್ಯನಿರ್ವಹಿಸುವಂತೆ ಮಾಡಬೇಕಾದ ಜವಾಬ್ದಾರಿ ಭಾರತದ ಪ್ರಜೆಗಳಾದ ನಮ್ಮೆಲ್ಲರದ್ದಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮನವಿ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಡಿ.ರಾಮು, ವೈ.ಆರ್.ರವಿಶಂಕರ್, ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಆರ್.ಪವಿತ್ರ, ಮುಖಂಡರಾದ ಮಹೇಂದ್ರ ಸ್ವಾಮಿ, ನಂಜುAಡಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net