ನ್ಯಾಯಯುತ ಬೇಡಿಕೆ ಈಡೇರಿಸಲಿ

26sirsi5
Published on

ಶಿರಸಿ: ರೈತರ ಹೋರಾಟ ಬಲಪ್ರಯೋಗದಿಂದ ಹತ್ತಿಕ್ಕಲು ಸಾಧ್ಯವಿಲ್ಲ. ಸರ್ಕಾರವು ನ್ಯಾಯಯುತ ಬೇಡಿಕೆ ಈಡೇರಿಸಲೇಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಒತ್ತಾಯಿಸಿದರು.

ರೈತ ಗಣರಾಜ್ಯೋತ್ಸವದ ಅಂಗವಾಗಿ ಭೂಮಿ ಹಕ್ಕು ಹೋರಾಟಗಾರರು ನಗರದ ಬಿಡ್ಕಿಬಯಲಿನ ಗಾಂಧಿ ಪ್ರತಿಮೆಗೆ ಗೌರವ ಅರ್ಪಿಸಿದ ನಂತರ ಜರುಗಿದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ಸರಿಯಲ್ಲ. ತಕ್ಷಣ ರೈತಪರ ನಡೆಯಿಡುವ ನಿರ್ಣಯ ಸ್ವೀಕರಿಸಬೇಕು ಎಂದರು.

ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ ಸಿದ್ದಾಪುರ ಮಾತನಾಡಿ, ಮುಂದಿನ ದಿನಗಳಲ್ಲಿ ತೀವ್ರ ತರದ ಹೋರಾಟದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇವೆ. ತಕ್ಷಣ ರೈತ ವಿರೋಧಿ ಕಾನೂನನ್ನು ಹಿಂದಕ್ಕೆ ಪಡೆಯಬೇಕು ಎಂದರು.

ರೈತ ಸಂಘಟನೆಯ ಪ್ರಮೋದ ಜಕಲಣ್ಣನವರ, ನವೀನ ಜಡೆದರ, ನಾಗಪ್ಪ ನಾಯ್ಕ, ಎಂ.ವಿ. ಬೈಂದೂರು ಮಾತನಾಡಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಧುರೀಣರು, ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ತಾಲೂಕು ಅಧ್ಯಕ್ಷ ಲಕ್ಷ್ಮಣ ಮಾಳಕ್ಕನವರ ಸ್ವಾಗತಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net