ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

13 ckm 2
ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಡಿಎಸ್‌ಎಸ್ ಕಾರ್ಯಕರ್ತರು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Published on

ಚಿಕ್ಕಮಗಳೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿರುವುದು ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಡೆದ ನೇರವಾದ ದಾಳಿಯಾಗಿದೆ. ದೇಶಕ್ಕೆ ಸ್ವತಂತ್ರ ಬಂದು ೭೮ ವರ್ಷ ಕಳೆಯುತ್ತಾ ಬಂದರೂ ಭಾರತದಲ್ಲಿ ಒಂದು ವರ್ಗದ ಮನಸ್ಥಿತಿ ಇನ್ನೂ ಬದಲಾಗಿಲ್ಲ ಎಂಬುದಕ್ಕೆ ಈ ಪ್ರಕರಣವೇ ಉತ್ತಮ ನಿದರ್ಶನವಾಗಿದೆ ಎಂದು ದೂರಿದರು.

ಮನುವಾದಿ ಮನಸ್ಥಿತಿಯ ವಕೀಲರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಸಲುವಾಗಿ ರಾಷ್ಟö್ರಪತಿಗಳು ತಕ್ಷಣವೇ ಮಧ್ಯಪ್ರವೇಶಿಸಿ ವಕೀಲನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿಎಸ್‌ಎಸ್ ಮುಖಂಡರಾದ ಕಬ್ಬಿಕೆರೆ ಮೋಹನ್ ಕುಮಾರ್, ಭಾರತಿ ಉಮೇಶ್ ರಾಜ್, ರಮೇಶ್, ಹರೀಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net