ನ್ಯಾಯಾಧೀಶರಿಂದ ಸ್ವಚ್ಛತಾ ಅಭಿಯಾನ

2809klb06
Published on

ಕಲಬುರಗಿ: ಸ್ವಚ್ಛತಾ ಹೀ ಸೇವಾ ಅಭಿಯಾನದ ನಿಮಿತ್ತ ನಗರದ ಜಿಲ್ಲಾ ನ್ಯಾಯಾಲಯದ ಆವರಣವನ್ನು ಜಿಲ್ಲಾ ನ್ಯಾಯಾಧೀಶರೇ ಸ್ವತಃ ಪೊರಕೆ ಹಿಡಿದು, ಸ್ವಚ್ಛ ಮಾಡುವ ಮೂಲಕ ಗಮನ ಸೆಳೆದರು. ಶುಕ್ರವಾರ ಬೆಳಗ್ಗೆ ೭.೩೦ ಗಂಟೆಗೆ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ನ್ಯಾಯಾಲಯದ ಆವರಣದಲ್ಲಿನ ಕಸ, ಕಡ್ಡಿ, ಪ್ಲಾಸ್ಟಿಕ್‌ಗಳನ್ನು ಒಟ್ಟುಗೂಡಿಸಿ, ಸ್ವಚ್ಛಗೊಳಿಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್.ನಾಗಶ್ರೀ, ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ, ವಕೀಲರ ಸಂಘದ ಕಾರ್ಯದರ್ಶಿ ಬಿ.ಎಸ್.ಕಾಶಿ, ಉಪಾಧ್ಯಕ್ಷ ಧರ್ಮಣ್ಣ, ನ್ಯಾಯಾಂಗ ಇಲಾಖೆ ಸಿಬ್ಬಂದಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಭಾಗವಹಿಸಿ, ಸ್ವಚ್ಛತಾ ಅಭಿಯಾನವನ್ನು ಯಶಸ್ವಿಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net