ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

04Kush01
Published on

ಕುಶಾಲನಗರ: ಕುಶಾಲನಗರದಲ್ಲಿ ನ್ಯಾಯಾಲಯಕ್ಕೆ ಸುಭದ್ರ ಕಟ್ಟಡ ನಿರ್ಮಾಣ ಆಗಲಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಜಿಲ್ಲಾ ನ್ಯಾಯಾಂಗ ಮತ್ತು ಲೋಕೋಪಯೋಗಿ ಇಲಾಖೆ ಮತ್ತು ಕುಶಾಲನಗರ ವಕೀಲರ ಸಂಘದ ನೇತೃತ್ವದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.


ಹೈಕೋರ್ಟ್ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವರಾಳೆ, ವಿ.ತ್ರಿಶಾನಂದ, ಎಂ.ಜಿ. ಶುಕುರೆ ಕಮಲ್, ಸಿ.ಎಂ. ಪೂಣಚ್ಚ, ಮಹಾ ವಿಲೇಖನಾಧಿಕಾರಿ ಕೆ.ಎಸ್. ಭರತ್ ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಭೃಂಗೇಶ್, ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಬಾಬು, ಕಾರ್ಯದರ್ಶಿ ಕೆ.ಬಿ. ಮೋಹನ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಡಿ.ನಾಗರಾಜು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net