ನ್ಯಾಯಾಲಯದ ಆದೇಶದಂತೆ ವಾಹನ ಬಿಡುಗಡೆ

25Sdpr(1)
Published on

  • ವಿಜಯವಾಣಿ ಸುದ್ದಿಜಾಲ ಸಿದ್ದಾಪುರ
    ಅನುಮತಿ ಇಲ್ಲದೆ ಪಟ್ಟಣದಲ್ಲಿ ವಾಹನಕ್ಕೆ ಮೈಕ್ ಕಟ್ಟಿಕೊಂಡು ಕೋವಿಡ್-19ರ ಬಗ್ಗೆ ಜಾಗೃತಿ ಮೂಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದ ವಾಹನವನ್ನು ನ್ಯಾಯಾಲಯದ ಆದೇಶದಂತೆ ಶನಿವಾರ ಬಿಡುಗಡೆಗೊಳಿಸಲಾಗಿದೆ.
    ಕರೊನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ನೆಲ್ಯಹುದಿಕೇರಿ ನಿವಾಸಿ ಅಜೀಜ್ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಗಿ ಪಡೆಯದೆ ತಮ್ಮ ವಾಹನಕ್ಕೆ ಮೈಕ್ ಕಟ್ಟಿಕೊಂಡು ಸಿದ್ದಾಪುರ ಪಟ್ಟಣದಲ್ಲಿ ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದಾಪುರ ನಿವಾಸಿ ಎಂ.ಎಚ್. ಮೂಸಾ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸಿದ್ದಾಪುರ ಪೊಲೀಸರು ಅಜೀಜ್ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದ್ದರು. ಮೂರು ತಿಂಗಳ ಬಳಿಕ ಮೈಕ್, ಸ್ಪೀಕರ್ ಮತ್ತು ವಾಹನ ಮುಟ್ಟುಗೋಲು ಹಾಕಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net