

ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆ.15 ರಂದು ಮಂಗಳವಾರ ಬೆಳಗ್ಗೆ 9 ಗಂಟೆಗೆ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಮಧು ಜಿ.ಮಾದೇಗೌಡ, ಸಿ.ಎನ್.ಮಂಜೇಗೌಡ, ಡಿವೈಎಸ್ಪಿ ಜಿ.ಯು.ಸೋಮೇಗೌಡ, ನಗರಸಭಾ ಆಯುಕ್ತ ಎಂ.ರಾಜಣ್ಣ ಪಾಲ್ಗೊಳ್ಳಲಿದ್ದಾರೆ. ನಿವೃತ್ತ ಶಿಕ್ಷಕ ಶಿವಣ್ಣ ಇಂದ್ವಾಡಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.