ಪಂ. ದೀನದಯಾಳ್ ಆದರ್ಶ ಪಾಲಿಸಿ

26-2
ಗೋಕಾಕ ನಗರದ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಪಂ. ದೀನದಯಾಳ್ ಉಪಾಧ್ಯಾಯ ಜನ್ಮದಿನ ಆಚರಿಸಲಾಯಿತು. ಸರ್ವೋತ್ತಮ ಜಾರಕಿಹೊಳಿ, ನಾಗಪ್ಪ ಶೇಖರಗೋಳ, ಮಹಾದೇವ ಶೆಕ್ಕಿ, ಆನಂದ ಮೂಡಲಗಿ ಇತರರು ಇದ್ದರು.
Published on

ಗೋಕಾಕ, ಬೆಳಗಾವಿ: ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ.ದೀನದಯಾಳ್ ಉಪಾಧ್ಯಾಯ ಅವರ ಕೊಡುಗೆ ಅನನ್ಯವಾದದ್ದು, ಅವರ ತತ್ತ್ವಾದರ್ಶಗಳನ್ನು ಯುವಕರು ಪಾಲಿಸಬೇಕು ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ನಗರದ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಭಾನುವಾರ ಅರಬಾವಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಿದ್ದ ಪಂ. ದೀನದಯಾಳ್ ಉಪಾಧ್ಯಾಯ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು, ರಾಜ್ಯ ಮತ್ತು ರಾಷ್ಟ್ರದ ಸಮಗ್ರ ಪ್ರಗತಿಗೆ ಶ್ರಮಿಸುತ್ತಿವೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಅರಬಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಬಸಪ್ಪ ಸಂತಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಮೂಡಲಗಿ ಪುರಸಭೆ ಸದಸ್ಯ ಪಾಂಡು ಮಹೇಂದ್ರಕರ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net