ಪಂಚ ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಆರ್ಥಿಕ ನೆರವು

3 ckm 4
ಚಿಕ್ಕಮಗಳೂರಿನ ತಾಪಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲೇಶ ಸ್ವಾಮಿ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ವಿಜಯಕುಮಾರ್, ಅನ್ಸರ್ ಅಲಿ, ನಾಗೇಶ್, ಗೌಸ್ ಮೊಹಿದ್ದೀನ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ನೆರವಿಗೆ ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದೆ. ಇದರಿಂದ ಮಹಿಳೆಯರು, ಯುವಜನತೆಗೆ ಆರ್ಥಿಕ ಬಲಸಿಕ್ಕಿದೆ ಎಂದು ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಮಹಿಳೆಯರು ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳ ನ್ನು ಜಾರಿಗೊಳಿಸಿದೆ. ಕುಟುಂಬದ ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿ ಆರ್ಥಿಕವಾಗಿ ಸಬಲಳಾದಲ್ಲಿ ಕುಟುಂಬವು ಉತ್ತವಾಗಿ ನಡೆಯುತ್ತದೆ ಎಂದರು.

ಪ್ರಸಕ್ತ ವರ್ಷದಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ತಾಲೂಕಿನ ಯಜಮಾನಿಯರಿಗೆ ೧೩೬ ಕೋಟಿ ರೂ.ಗೂ ಹೆಚ್ಚಿನ ಹಣವನ್ನು ನೇರವಾಗಿ ಅವರ ಖಾತೆಗೆ ಸಂದಾಯ ಮಾಡಲಾಗಿದೆ. ಗೃಹಜ್ಯೋತಿಯಡಿ ೮೫,೨೭೮ ಗ್ರಾಹಕರಿಗೆ ಶೂನ್ಯ ಬಿಲ್ಲಿನಡಿ ಸರ್ಕಾರವು ಮೆಸ್ಕಾಂಗೆ ೧೯.೨೯ ಕೋಟಿ ರೂ. ಸಂದಾಯ ಮಾಡಿದೆ ಎಂದು ಹೇಳಿದರು.

ಶಕ್ತಿ ಯೋಜನೆಯು ಚಿಕ್ಕಮಗಳೂರು ವಿಭಾಗದಲ್ಲಿ ಉಚಿತ ಬಸ್ ಸೌಲಭ್ಯದಡಿ ಯೋಜನೆ ಅನುಷ್ಟಾನ ದಿನದಿಂದ ಇಲ್ಲಿಯವರೆಗೂ ಸುಮಾರು ೨೪ ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ನಡೆಸಿ ಯೋಜನೆ ಸದ್ಬಳಕೆ ಮಾಡಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆ ಡಿಬಿಟಿ ಮೊಬಗಲನ್ನು ಪಡಿತರ ಚೀಟಿದಾರರ ಖಾತೆಗೆ ಜಮೆ ಮಾಡಲಾಗಿದ್ದು, ಫೆಬ್ರವರಿಯಿಂದ ಹಣದ ಬದಲಾಗಿ ಪಡಿತರ ಹಂಚಿಕೆ ಮಾಡಲಾಗಿದೆ ಎಂದರು.

ಯುವಸಮೂಹಕ್ಕೆ ಅನುಕೂಲವಾಗಲು ಯುವನಿಧಿ ಯೋಜನೆಯಡಿ ತಾಲೂಕಿನಲ್ಲಿ ಪದವಿ ಹಾಗೂ ಡಿಪ್ಲಮಾ ವ್ಯಾಸಂಗ ಮಾಡಿದ ೧,೩೭೮ ಯುವಜನತೆಗೆ ೩ ಕೋಟಿ ರೂ. ಹೂ ಹೆಚ್ಚು ಹಣವನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಅವರ ಖಾತೆಗೆ ಜಮೆಗೊಳಿಸಿ ಆರ್ಥಿಕವಾಗಿ ಸದೃಢಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಒಟ್ಟಾರೆ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸಂಪೂರ್ಣ ಯಶಸ್ವಿಗೊಂಡು ಸರ್ವಜನರು ಅಭಿವೃದ್ಧಿ ಹೊಂದುವ ಜೊತೆಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಗಟ್ಟಿಯಾಗಿದ್ದಾರೆ ಎಂದರು.

ಸಭೆಯಲ್ಲಿ ತಾಪಂ ಇಒ ವಿಜಯ್‌ಕುಮಾರ್, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಅನ್ಸರ್‌ಆಲಿ, ಸದಸ್ಯರಾದ ನಾಗೇಶ್ ಅರಸ್, ಜಯಂತಿ, ವಿಂದ್ಯಾ, ಧರ್ಮಯ್ಯ, ಕೃಷ್ಣ, ಗೌಸ್‌ಮೊಹಿಯುದ್ದೀನ್, ಧರ್ಮರಾಜು, ನವರಾಜು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net