ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಕೇಂದ್ರ ಮಂತ್ರಿ ಭಗವಂತ ಖೂಬ ವಿಶ್ವಾಸ

CTD 24 CENTRALA MINISTER--04
Published on


ಚಿತ್ರದುರ್ಗ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ದೊರೆಯಲಿದೆ ಎಂದು ಕೇಂದ್ರ ಮಂತ್ರಿ ಭಗವಂತ ಖೂಬ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗ ಸೀಬಾರದ ಶ್ರೀ ಮೇದಾರ ಕೇತೇಶ್ವರ ಗುರುಪೀಠಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀ ಇಮ್ಮಡಿ ಬಸವಪ್ರಭು ಮೇದಾರ ಕೇತೇಶ್ವರ ಸ್ವಾಮೀಜಿ ಅವರ ಆರ್ಶೀವಾದ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರಮೋದಿ ಅವರ ಆಡಳಿತ ಪಂಚರಾಜ್ಯಗಳಲ್ಲಿ ಬಿಜೆಪಿಗೆ ವರದಾನವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣಾ ಪೂರ್ವ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ದೇಶದ ಬೇರೆ ಬೇರೆ ರಾಜ್ಯಗಳ ಜನರಿಗೆ ಗೊತ್ತಾಗಿದೆ.
ಆದ್ದರಿಂದ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್‌ಗಡ, ಮಿಜೋರಾಂ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲು ಉಂಟಾಗಲಿದೆ.

ಸುಳ್ಳು ಗ್ಯಾರೆಂಟಿಗಳಿಂದ ಕರ್ನಾಟಕದ ಜನರಿಗೆ ನಿರಾಸೆಯಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಾಂ ಗ್ರೆಸ್ ಆಟ ನಡೆಯುವುದಿಲ್ಲ.
ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪರದಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದರು.

ಎಸ್‌ಜೆಎಂ ವಿದ್ಯಾಪೀಠದ ಸಿಇಒ ಎಂ.ಭರತ್‌ಕುಮಾರ್, ವಕೀಲ ಎನ್.ಬಿ.ವಿಶ್ವನಾಥ್, ಅಂಜನಮೂರ್ತಿ,ಶ್ರೀನಿವಾಸ್, ಮಂಜುನಾಥ್, ಸೋಮಶೇಖರ್ ಮತ್ತಿತರ ಭಕ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net