ಪಂಚಾಮೃತ-ಕನಕಾಭಿಷೇಕ

12 KAMPLI 02
Published on

ಕಂಪ್ಲಿ: ಪಟ್ಟಣದ ಸತ್ಯನಾರಾಯಣಪೇಟೆಯ ಶ್ರೀಮನ್ ಮಧ್ವಾಚಾರ್ಯರ ಮೂಲಮಹಾಸಂಸ್ಥಾನ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಶಾಖಾಮಠದಲ್ಲಿ ಗುರುಸಾರ್ವಭೌಮರ ಉತ್ತರಾರಾಧನೆ ಕಾರ್ಯಕ್ರಮಗಳು ಮಂಗಳವಾರ ಶ್ರದ್ಧೆ-ಭಕ್ತಿಯಿಂದ ನಡೆದವು.

ಬೆಳಗ್ಗೆ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ಅಷ್ಟೋತ್ತರಸಹಿತ ಫಲ ಪಂಚಾಮೃತಾಭಿಷೇಕ, ರಥೋತ್ಸವ, ಸ್ವಸ್ತಿವಾಚನ, ಕನಕಾಭಿಷೇಕ, ನೈವೇದ್ಯ, ಹಸ್ತೋದಕ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಗಳು ವಿಚಾರಣಾಕರ್ತ ಟಿ.ಕೊಟ್ರೇಶ, ವ್ಯವಸ್ಥಾಪಕ ಪುರುಷೋತ್ತಮಾಚಾರ್, ಅರ್ಚಕ ಕಿಶೋರಾಚಾರ್ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆದವು. ರಾಯರ ಬೃಂದಾವನವನ್ನು ಪುಷ್ಪಾದಿಗಳಿಂದ ಅಲಂಕರಿಸಲಾಗಿತ್ತು. ಪಟ್ಟಣ ಹಾಗೂ ತಾಲೂಕಿನ ನಾನಾ ಗ್ರಾಮಗಳಿಂದ ಭಕ್ತರು ಆಗಮಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net