ಪಂಡಿತ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೆ

22sirsi4
Published on

ಶಿರಸಿ: ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳ ಸುಸಜ್ಜಿತ ಹೈಟೆಕ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಕಾಮಗಾರಿ ಶೀಘ್ರದಲ್ಲಿ ಆರಂಭವಾಗುವ ಸಾಧ್ಯತೆಯಿದೆ.

ಪ್ರಸಕ್ತ ವರ್ಷದ ಬಜೆಟ್​ನಲ್ಲಿ ಈಗಿರುವ ಪಂಡಿತ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಮೂಲಕ 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮಾಡಲು ಘೊಷಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಶಾಸಕರು ನೀಡಿದ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.

ಈಗಾಗಲೇ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿಯೇ 60 ಹಾಸಿಗೆಗಳ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಡಿಸೆಂಬರ್ ತಿಂಗಳಲ್ಲಿ ಸರ್ಕಾರಿ ಆಸ್ಪತ್ರೆಗೆ ಬಿಟ್ಟು ಕೊಡುವ ಸಾಧ್ಯತೆಯಿದೆ. ಈಗಿರುವ ಆಸ್ಪತ್ರೆಯ ಹಿಂಭಾಗದಲ್ಲಿರುವ ಕೊಠಡಿಗಳಳನ್ನು ಬಳಸಿಕೊಡು 250 ಹಾಸಿಗೆಯುಳ್ಳ ಹೈಟೆಕ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡುವ ಸಾಧ್ಯತೆಯಿದೆ. ಈಗಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿದಿನ ನೂರಾರು ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿ ತಿಂಗಳು ಸರಿ ಸುಮಾರು 300ರಷ್ಟು ಹೆರಿಗೆ ಆಗುತ್ತಿವೆ. ಶಿರಸಿಯಲ್ಲದೇ ಪಕ್ಕದ ತಾಲೂಕುಗಳಿಂದಲೂ ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸುತ್ತಾರೆ. ಹೀಗಾಗಿ ಈಗಿರುವ ಆಸ್ಪತ್ರೆ ಮೇಲೆ ಸಾಕಷ್ಟು ಒತ್ತಡವಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದಹೊಸ ಪ್ರಸ್ತಾವ ಸರ್ಕಾರದ ಮುಂದಿಡಲಾಗಿತ್ತು.

ಆಸ್ಪತ್ರೆಯ ಪಕ್ಕದಲ್ಲಿ ನಿರ್ವಣವಾಗುತ್ತಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ ಮುಗಿದ ಬಳಿಕ ಹೈಟೆಕ್ ಆಸ್ಪತ್ರೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆಯಿದೆ. ಈ ಆಸ್ಪತ್ರೆಗೆ ಮೆಡಿಕಲ್ ಕಾಲೇಜಿಗೆ ಸಿಗುವ ಎಲ್ಲ ಸೌಲಭ್ಯಗಳು ಸಿಗಲಿದೆ. ಡಾ.ವಿನಾಯಕ ಭಟ್ಟ, ತಾಲೂಕು ಆರೋಗ್ಯಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net