ಮಂಗಳೂರು: ನಗರದಿಂದ ಬೆಂಗಳೂರು ಹೊರಟಿದ್ದ ಬಸ್ ತಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಭಿನ್ನ ಕೋಮಿನ ಯುವಕನಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಪಂಪುವೆಲ್ ಬಳಿ ಗುರುವಾರ ರಾತ್ರಿ ನಡೆದಿದೆ.
ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಿನ್ನ ಕೋಮಿನ ಯುವತಿ ಜತೆಗೆ ಪ್ರಯಾಣಿಸಿರುವುದು ಘಟನೆಗೆ ಕಾರಣ ಎನ್ನಲಾಗಿದೆ. ಯುವತಿಯನ್ನು ಪೊಲೀಸರು ಆಕೆಯ ಮನೆಗೆ ತಲುಪಿಸಿದ್ದಾರೆ. ಹಲ್ಲೆ ನಡೆಸಿದವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ 15 ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವು ಮುಖಂಡರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.