ಪಕ್ಷ ಟಿಕೆಟ್ ನೀಡಿದರೆ ಮಾತ್ರ ಸ್ಪರ್ಧೆ

Chandrappa_BN
Published on

ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಅನೇಕರು ಆಕಾಂಕ್ಷಿಗಳಾಗಿದ್ದು, ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ಮಾತ್ರ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಎಲ್ಲಿ ಬೇಕಾದರೂ ಸ್ಪರ್ಧಿಸಲು ಅರ್ಹರು. ಚಾಮರಾಜನಗರವಲ್ಲ, ಕನ್ಯಾಕುಮಾರಿವರೆಗೂ ದೇಶದ ಯಾವುದೇ ಮೂಲೆಯಲ್ಲಾಗಲಿ ಹೈಕಮಾಂಡ್ ನಿರ್ಧರಿಸಿ, ಟಿಕೆಟ್ ನೀಡಿದಲ್ಲಿ ಸ್ಪರ್ಧಿಸುತ್ತೇನೆ. ನಾನೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದರು.

ಈ ಕ್ಷೇತ್ರ ಮಾತ್ರವಲ್ಲ, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಹೆಚ್ಚುತ್ತಿರುವ ವಿಚಾರ ಪಕ್ಷ ಇನ್ನಷ್ಟು ಬಲಗೊಳ್ಳುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ. ಮಾಜಿ ಸಚಿವ ಎಚ್.ಆಂಜನೇಯ, ಮಂಜುನಾಥ್, ತಿಪ್ಪೇಸ್ವಾಮಿ ಹೀಗೆ.. ಅನೇಕರು ಆಕಾಂಕ್ಷಿಗಳಿರಬಹುದು. ಪಕ್ಷ ಯಾರಿಗೆ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಿ, ದೇಶದೊಳಗೆ ಜಾತ್ಯತೀತ ತತ್ವ-ಸಿದ್ಧಾಂತ ನಿರ್ಮಿಸುವುದೇ ಕಾಂಗ್ರೆಸ್ ಧ್ಯೇಯ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net