ಪಕ್ಷ ಸಂಘಟನೆಗೆ ಆದ್ಯತೆ ನೀಡಿ

7-gdg-1
Published on

ಗದಗ: ವಿಧಾನ ಪರಿಷತ್ ಚುನಾವಣೆಗೆ ಜಿಲ್ಲಾ ಕಾರ್ಯಕರ್ತರು ಸಜ್ಜಾಗಬೇಕು. ಚುನಾವಣೆ ಹಿನ್ನೆಲೆಯಲ್ಲಿ ಸಂಘಟನಾತ್ಮಕ ಸಭೆಗಳು ಹೆಚ್ಚು ನಡೆಯಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದ ವಿಠಲಾರೂಢ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು, ಕಾರ್ಯಕರ್ತರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ವಿ.ಪ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮಾತನಾಡಿದರು. ಇದೇ ಸಂದರ್ಭದಲ್ಲಿ ರಮೇಶ ಜೇರಬಂಡಿ, ರವಿ ಚುಂಚಾ, ಮಹೇಶ ವಗ್ಗಾ, ನಾಗರಾಜ ಕಾಮರ್ತಿ, ಮಂಜುನಾಥ ಗಾಳಿ, ಭೀಮೇಶ ಲೈನದ್, ರಾಜೇಶ ತಾಡೂರು, ಶ್ರೀಧರ ಹುಳ್ಳಿ ಇತರರು ಬಿಜೆಪಿ ಸೇರ್ಪಡೆಗೊಂಡರು. ಶಾಸಕ ರಾಮಣ್ಣ ಲಮಾಣಿ, ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ, ಸಹ ಪ್ರಭಾರಿ ನಾರಾಯಣ ಜರತಾಘರ, ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಬಸವಾ, ಕಾಂತಿಲಾಲ ಬನ್ಸಾಲಿ, ಶ್ರೀಪತಿ ಉಡುಪಿ, ರಾಜು ಕುರಡಗಿ ಇದ್ದರು.

ಎಸ್​ಟಿ ಕಾರ್ಯಕಾರಿಣಿ : ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಎಸ್.ಟಿ. ಮೋರ್ಚಾ ಕಾರ್ಯಕಾರಿಣಿ ಸಭೆ ಜರುಗಿತು. ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net