ಪಕ್ಷ ಸಂಘಟನೆಗೆ ಆಸರೆಯಾಗಲಿದ್ದಾರೆ ಬೊಮ್ಮಾಯಿ

28balchandraaa
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬುಧವಾರ ಹೂಗುಚ್ಛ ನೀಡಿ ಅಭಿನಂದಿಸಿದರು. ಶಾಸಕರಾದ ಮಹಾದೇವಪ್ಪ ಯಾದವಾಡ, ಅರವಿಂದ ಬೆಲ್ಲದ, ನೆಲಮಂಗಲ ಮಾಜಿ ಶಾಸಕ ಎಂ.ವಿ.ನಾಗರಾಜ ಇದ್ದರು.
Published on

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬೆಂಗಳೂರಿನ ಆರ್.ಟಿ. ನಗರದ ನಿವಾಸದಲ್ಲಿ ಭೇಟಿಯಾಗಿ ಶುಭಾಶಯ ಕೋರಿದರು. ಬಸವರಾಜ ಬೊಮ್ಮಾಯಿ ಅವರು ನೂತನ ಸಿಎಂ ಆಗಿ ಆಯ್ಕೆಯಾಗಿರುವುದು ಸಂತಸದ ವಿಚಾರ. ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿರುವ ಅವರು, ಪಕ್ಷ ಸಂಘಟನೆಗೂ ಸಹ ಆಸರೆಯಾಗಿ ನಿಲ್ಲಲಿದ್ದಾರೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಂತೆ ರಾಜ್ಯದ ಸರ್ವಾಂಗೀಣ ವಿಕಾಸಕ್ಕೆ ಹಾಗೂ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಬಡವರು, ಮಹಿಳೆಯರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳ ಹಿತಕ್ಕನುಗುಣವಾಗಿ ಬೊಮ್ಮಾಯಿ ನೇತೃತ್ವದ ಹೊಸ ಸರ್ಕಾರ ಬದ್ಧವಾಗಿರಲಿದೆ. ಅವರಿಂದ ಇಡೀ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಒಳ್ಳೆಯದಾಗಲಿದೆ. ಬೊಮ್ಮಾಯಿ ಅವರು ಮೂಲತಃ ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಯವರು ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಶಾಸಕ ಬಾಲಚಂದ್ರ ಸಂತಸ ವ್ಯಕ್ತಪಡಿಸಿದರು.

ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ಧಾರವಾಡ ಶಾಸಕ ಅರವಿಂದ ಬೆಲ್ಲದ, ನೆಲಮಂಗಲ ಮಾಜಿ ಶಾಸಕ ಎಂ.ವಿ.ನಾಗರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net