

ಚಿತ್ರದುರ್ಗ:ಯುವಕರ ಸಹಿತ ಎಲ್ಲ ಕಾರ‌್ಯಕರ್ತರು, ಮುಖಂಡರನ್ನು ಒಟ್ಟಾಗಿ ತೆಗೆದುಕೊಂಡು ಪಕ್ಷವನ್ನು ಸದೃಢವಾಗಿ ಸಂಘಟಿಸುವ ಶಕ್ತಿ,ಯುಕ್ತಿ ಶಾಸಕ ಹಾಗೂ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಇದೆ. ಅತ್ಯಂತ ಕಿರಿಯ ವಯಸ್ಸಿನಲ್ಲೇ ಅವರಿಗೆ ಪಕ್ಷದ ಹೈ ಕಮಾಂಡ್ ಅತ್ಯಂತ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ನಮ್ಮ ರಾಜ್ಯದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗುವ ನಿಟ್ಟಿನಲ್ಲಿ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಆತ್ಮವಿಶ್ವಾಸ, ಛಲ ವಿಜಯೇಂದ್ರ ಅವರಲ್ಲಿ ಇದೆ.