ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ

7293c176-3c25-4f33-bcf4-dbafbeae4140
Published on

ಮೈಸೂರು: ಕಾಂಗ್ರೆಸ್ ಪಕ್ಷದಿಂದ ಹೋದವರು ಮಾತ್ರವಲ್ಲ. ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಬರುವವರು ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರಬೇಕು ಎಂದರು.


ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ ರೀ? ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಅವರಿಗೆ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪ್ರತಿಪಕ್ಷಕ್ಕೆ ಇಂತಹ ಪರಿಸ್ಥಿತಿ ಎದುರಾಗಿರಲ್ಲಿಲ್ಲ ಎಂದು ಜರಿದರು.


ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ನಮಗೆ ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net