ಪಕ್ಷದ ನಾಯಕರ ತೀರ್ಮಾನಕ್ಕೆ ಬದ್ಧ : ಆರೋಗ್ಯ ಸಚಿವ ಶ್ರೀರಾಮುಲು

5 ramulu new
Published on

ತುಮಕೂರು: ಆರೋಗ್ಯ ಸಚಿವ ಶ್ರೀರಾಮುಲು ಬುಧವಾರ ಸಿದ್ಧಗಂಗಾ ಮಠಕ್ಕೆ ಆಗಮಿಸಿ ಪುತ್ರಿ ವಿವಾಹಕ್ಕೆ ಆಗಮಿಸುವಂತೆ ಶ್ರೀಸಿದ್ದಲಿಂಗಸ್ವಾಮೀಜಿ ಅವರನ್ನು ಆಹ್ವಾನಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಶ್ರೀರಾಮುಲು, ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಎಲ್‌ಇಡಿ ವ್ಯಾನ್ ರಾಜ್ಯದೆಲ್ಲೆಡೆ ಸಂಚರಿಸಲಿದೆ ಎಂದರು. ಸಿಎಂ ಬಿಎಸ್‌ವೈ ಹಾಗೂ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವು ಬದ್ಧ, ಭಾರತೀಯ ಜನತಾ ಪಾರ್ಟಿಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದು ಗುರುವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಸಂಸದ ಅನಂತಕುಮಾರ್ ಹೆಗಡೆ ಅವರು ಮಹಾತ್ಮಗಾಂಧಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆನ್ನಲಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಗಿದೆ, ಈ ಬಗ್ಗೆ ಪಕ್ಷದ ಮುಖಂಡರು ಕ್ರಮಕೈಗೊಳ್ಳುತ್ತಾರೆ ಎಂದರು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಾನು ಡಿಸಿಎಂ ಹುದ್ದೆ ಕೇಳಿ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡುವುದಿಲ್ಲ, ನಾನು ಮಾತನಾಡುವುದರಿಂದ ಪಕ್ಷದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ ಎಂದರು.

ರಾಜ್ಯದಲ್ಲಿ ಕರೋನಾ ಲಕ್ಷಣ ಕಂಡುಬಂದ 47 ಮಂದಿಯಿಂದ ರಕ್ತದ ಮಾದರಿ ಶೇಖರಿಸಿದ್ದೇವೆ. ಯಾರಲ್ಲಿಯೂ ವೈರಸ್ ಇರುವುದು ದೃಢವಾಗಿಲ್ಲ. ಶ್ರೀರಾಮುಲು ಆರೋಗ್ಯ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net