ಪಕ್ಷಪಾತ ಧೋರಣೆಯ ಬಜೆಟ್

bkt-23-3 d
ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ
Published on

ಬಾಗಲಕೋಟೆ: ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಸಾಮಾನ್ಯ ಮತ್ತು ಪಕ್ಷಪಾತ ಧೋರಣೆಯಿಂದ ಕೂಡಿದೆ. ಸರ್ಕಾರ ರಚನೆಗೆ ಅನಿವಾರ್ಯವಾಗಿದ್ದ ಬಿಹಾರ ಮತ್ತು ಆಂಧ್ರಪ್ರದೇಶಗಳಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ 19 ಸಂಸದರನ್ನು ಗೆಲ್ಲಿಸಿದ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ. ಮುಖ್ಯವಾಗಿ ಲಕ್ಷಾಂತರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು, ಬಾಗಲಕೋಟೆ – ಕುಡಚಿ ರೈಲು ಮಾರ್ಗ ಪೂರ್ಣಗೊಳಿಸಲು, ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಮೀಸಲಿಡದೇ ಇರುವುದು ಅತ್ಯಂತ ನಿರಾಸೆ ಮೂಡಿಸಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net