ಪಕ್ಷೇತರ ಅಭ್ಯರ್ಥಿ ಖಾದ್ರಿ ಆಸ್ತಿ 1.15 ಕೋಟಿ

Ajeempeer Khadri 1
Published on

ಶಿಗ್ಗಾಂವಿ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಪರಿಣಾಮ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ 1.15 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಖಾದ್ರಿ ಬಳಿ 50 ಸಾವಿರ ರೂ. ನಗದು ಇದೆ. 30 ಲಕ್ಷ ರೂ. ಮೌಲ್ಯದ ಟೊಯೋಟಾ ಕಾರು ಸೇರಿ 30.50 ಲಕ್ಷ ರೂ. ಮೌಲ್ಯದ ಚರಾಸ್ತಿಯಿದೆ.

ಕ್ಯಾಲಕೊಂಡ ಗ್ರಾಮದಲ್ಲಿ 25 ಲಕ್ಷ ರೂ. ಮೌಲ್ಯದ 17 ಎಕರೆ ಕೃಷಿ ಭೂಮಿಯಿದೆ. ಹುಲಗೂರ ಗ್ರಾಮದಲ್ಲಿ ಮನೆ, ಹುಬ್ಬಳ್ಳಿಯಲ್ಲಿ ಪ್ಲಾಟ್, ಬೆಂಗಳೂರಿನಲ್ಲಿ ಬಿಡಿಎ ನಿವೇಶನ ಸೇರಿದಂತೆ 84 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಇರುವುದಾಗಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. 16 ಲಕ್ಷ ಸಾಲ ಹೊಂದಿದ್ದು, ಹುಲಗೂರ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಒಂದು ಅಪರಾಧಿಕ ಪ್ರಕರಣ ದಾಖಲಾಗಿದ್ದು, ಸದ್ಯ ಜನಪ್ರತಿನಿಧಿಗಳ ನ್ಯಾಯಾಲಯದಿಂದ ತಡೆಯಾಜ್ಞೆಯಿದೆ. ಹುಲಗೂರಿನಲ್ಲಿ ಹಾಕಿದ್ದ ಭಗವಾಧ್ವಜ ತೆರವುಗೊಳಿಸುವ ಕುರಿತು ಮೊಬೈಲ್‌ನಲ್ಲಿ ಸಂಭಾಷಣೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಇವರ ಮೇಲೆ ಕೇಸ್ ದಾಖಲಾಗಿದೆ. ಇವರ ಪತ್ನಿ ಬಳಿ 10 ಸಾವಿರ ರೂ. ನಗದು, 1.20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net