ಪಚನ ಕ್ರಿಯೆಯಲ್ಲಿ ಹಲ್ಲುಗಳು ಪಾತ್ರ ಮುಖ್ಯ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯ

IMG-20230608-WA0058
Published on

ಚಾಮರಾಜನಗರ : ಮನುಷ್ಯನ ಪಚನ ಕ್ರಿಯೆಯಲ್ಲಿ ಹಲ್ಲುಗಳು ಬಹುಮುಖ್ಯ ಪಾತ್ರ ವಹಿಸಿವೆ. ಆದ್ದರಿಂದ ಹಲ್ಲಿನ ರಕ್ಷಣೆಗೆ ಪ್ರತಿಯೊಬ್ಬರು ಗಮನಹರಿಸಬೇಕು ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.


ಮಲೆಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಕೆಲವರು ಆರೋಗ್ಯದ ಸಮಸ್ಯೆಯ ಜತೆಗೆ ಹಲ್ಲುಗಳ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಹಲ್ಲುಗಳ ಸ್ವಚ್ಛತೆಯ ಬಗ್ಗೆ ಗಮನಹರಿಸದಿರುವುದು ಮುಖ್ಯ ಕಾರಣ. ಅಲ್ಲದೆ ಹೆಚ್ಚು ಸಿಹಿ ಪದಾರ್ಥ ಹಾಗೂ ಗಟ್ಟಿ ಪದಾರ್ಥಗಳ ಬಳಕೆಯಿಂದ ದಂತ ಸಮಸ್ಯೆಗೆ ಕಾರಣವಾಗಬಹುದು. ಈ ದಿಸೆಯಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿರುವ ಈ ಶಿಬಿರದ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಪ್ರಾಧಿಕಾರದ ಕಾರ್ಯದರ್ಶಿ ಎಸ್. ಕಾತ್ಯಾಯಿನಿದೇವಿ, ಡಿಎಚ್‌ಒ ಡಾ.ವಿಶ್ವೇಶ್ವರಯ್ಯ, ದಂತ ವೈದ್ಯ ಡಾ. ಮಂಜುನಾಥ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net