ಪಟಾಕಿ ಸಿಡಿಸಿ ಕಾರ್ಯಕರ್ತರ ಸಂಭ್ರಮ

12 kollegal-2.A
Published on

ಕೊಳ್ಳೇಗಾಲ: ಕೆಪಿಸಿಸಿ ಅಧ್ಯಕ್ಷಗಾದಿಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನೇಮಕಗೊಂಡ ಹಿನ್ನೆಲೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸಂಜೆ ಸಂಭ್ರಮಾಚರಣೆ ನಡೆಸಿದರು.

ಮಾಜಿ ಶಾಸಕ ಎಸ್.ಬಾಲರಾಜು ನೇತೃತ್ವದಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚೇತನ್ ದೊರೆರಾಜ್ ಸಮ್ಮುಖದಲ್ಲಿ ಕಾರ್ಯಕರ್ತರು ಪಟ್ಟಣದ ಮಸೀದಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಇದೇ ವೇಳೆ ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿ, ರಾಜಕೀಯ ಚತುರ ಹಾಗೂ ನಮ್ಮ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಚ್ಚಿನ ಉತ್ಸಾಹ ತಂದಿದೆ. ಮುಂದಿನ ದಿನಗಳಲ್ಲಿ ಡಿಕೆಶಿ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕ ಜಿಲ್ಲಾಧ್ಯಕ್ಷ ಕೆ.ನಾಗರಾಜು, ಜಿ.ಪಂ.ಮಾಜಿ ಸದಸ್ಯರಾದ ಶಿವಕುಮಾರ್, ಕೊಪ್ಪಾಳಿ ಮಹದೇವನಾಯಕ, ತಾ.ಪಂ ಸದಸ್ಯ ಜಾವಾದ್ ಅಹಮದ್, ಮುಖಂಡರಾದ ಬಿ.ಬಸವಣ್ಣ, ಸ್ವಾಮಿ ನಂಜಪ್ಪ, ನಗರಸಭೆ ಮಾಜಿ ಸದಸ್ಯರಾದ ಎಸ್.ಮೂರ್ತಿ, ಚಂದ್ರಶೇಖರ್, ಮುಖಂಡ ದಿಲೀಪ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net