ಪಟೇಲರ ಹೋರಾಟ ಇಂದಿಗೂ ಸ್ಮರಣೀಯ

17 HBD 2
ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಹುಮನಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪಟೇಲ್ ಪುತ್ಥಳಿಗೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ಎಂಎಲ್ಸಿ ಭೀಮರಾವ ಪಾಟೀಲ್ ಮಾಲಾರ್ಪಣೆ ಮಾಡಿದರು. ಪುರಸಭೆ ಅಧ್ಯಕ್ಷೆ ಪಾರ್ವತಿಬಾಯಿ ಶೇರಿಕಾರ, ಬಸವರಾಜ ಆರ್ಯ, ಶಿವಲಿಂಗ ಸ್ವಾಮಿ ಇತರರಿದ್ದರು.
Published on

ಹುಮನಾಬಾದ್: ನಿಜಾಮನ ಕಪಿಮುಷ್ಠಿಯಲ್ಲಿದ್ದ ಹೈದರಾಬಾದ್ ಕರ್ನಾಟಕ ಭಾಗವನ್ನು ಸ್ವತಂತ್ರಗೊಳಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಶ್ರಮ ಪ್ರಮುಖ ಹಾಗೂ ಸ್ಮರಣೀಯ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಬುಧವಾರ ಪಟ್ಟಣದ ಪಟೇಲ್ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ನಮಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ಎಲ್ಲರನ್ನು ನೆನಪಿಸಿಕೊಳ್ಳಬೇಕು. ಅವರು ತಂದುಕೊಟ್ಟ ಈ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಬಸವರಾಜ ಆರ್ಯ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಆದರ್ಶ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಹೈಕ ಹೋರಾಟದಲ್ಲಿ ಸಾಕಷ್ಟು ಮಹನೀಯರು ಭಾಗಿಯಾಗಿದ್ದರು, ಅವರೆಲ್ಲರನ್ನು ನಾವೂ ಸ್ಮರಿಸಬೇಕಿದೆ ಎಂದರು.

ಪುರಸಭೆ ಅಧ್ಯಕ್ಷೆ ಪಾರ್ವತಿಬಾಯಿ ಶೇರಿಕಾರ, ಉಪಾಧ್ಯಕ್ಷ ಮುಕ್ರಂ, ಸರ್ದಾರ್ ಪಟೇಲ್ ಸಮಿತಿ ಆಧ್ಯಕ್ಷ ಶಿವಲಿಂಗ ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net