

ಹಾಸನ: ಚನ್ನರಾಯಪಟ್ಟಣ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ನಿರ್ಲಕ್ಷ ವಹಿಸಿರುವುದರಿಂದ ವಿವಿದೋದ್ದೇಶ ಸಮಾಜ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಬೃಹತ್ ಅಂಬೇಡ್ಕರ್ ಪುತ್ಥಳಿಯನ್ನ ನಿರ್ಮಾಣ ಮಾಡಲಾಗುವುದು ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಸತೀಶ್ ತಿಳಿಸಿದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಿಸುವಂತೆ ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಮೇಲೆ ಮೇಲೆ ಸಾಕಷ್ಟು ಒತ್ತಡ ತಂದರು ಕೂಡ ಅವರು ನಿರ್ಲಕ್ಷ ವಹಿಸಿದ್ದಾರೆ. ಆದ್ದರಿಂದ ಅಂಬೇಡ್ಕರ್ ಅನುಯಾಯಿಗಳು, ಅಭಿಮಾನಿಗಳು ಸೇರಿ ಒಂದು ಟ್ರಸ್ಟನ್ನು ಸ್ಥಾಪನೆ ಮಾಡಿಕೊಂಡು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಪುತ್ಥಳಿ ನಿರ್ಮಾಣ ಮಾಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ 16 ಅಡಿ ಎತ್ತರದ ಅಂಬೇಡ್ಕರ್ ಅವರ ಪುತ್ಥಳಿಯನ್ನ ನಿರ್ಮಾಣ ಮಾಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿಗಳಿಂದ ಒಪ್ಪಿಗೆ ಪಡೆದಿದ್ದು, ಸಾರ್ವಜನಿಕರು,ಸಂಘ-ಸಂಸ್ಥೆ ಅವರಿಂದ ದೇಣಿಗೆ ಸಂಗ್ರಹಿಸಿ ಈ ಕಾರ್ಯವನ್ನ ಕೈಗೆತ್ತಿಕೊಂಡು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಂಗಪ್ಪ, ಮಧುಸೂದನ್, ಯಾಸಿರ್ ಸತೀಶ್, ಮಲ್ಲೇಶ್ ಹಾಜರಿದ್ದರು.