

ಗುಂಡ್ಲುಪೇಟೆ: ಕೊನೆಯ ಆಷಾಢ ಶುಕ್ರವಾರದ ಅಂಗವಾಗಿ ಪಟ್ಟಣದ ಗ್ರಾಮ ದೇವತೆ ಪಟ್ಟಲದಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಶುಕ್ರವಾರ ಬೆಳಗಿನ ಜಾವ ಅಭಿಷೇಕ ನಡೆದವು. ಮೂಲವಿಗ್ರಹಕ್ಕೆ ಹೂ, ವಸ್ತ್ರಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ವಿಗ್ರಹಕ್ಕೆ ಬೆಣ್ಣೆ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಿದರು. ಭಕ್ತರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಉತ್ಸವ ಮೂರ್ತಿಯನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.