ಪಠ್ಯದ ಜತೆಗೆ ಕ್ರೀಡೆ ಮುಖ್ಯ

9-KGL1,
Published on

ಕೊಳ್ಳೇಗಾಲ: ಮಕ್ಕಳ ಸವಾರ್ಂಗೀಣ ಬೆಳವಣಿಗೆಗಾಗಿ ಪಠ್ಯದ ಜತೆಗೆ ಕ್ರೀಡೆ ಮುಖ್ಯವಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಾಮರಾಜನಗರ ಜಿಲ್ಲೆ, ವಿಶ್ವಚೇತನ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಕೊಳ್ಳೇಗಾಲ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾಕೂಟದಲ್ಲಿ ಮಕ್ಕಳು ಉತ್ಸುಕರಾಗಿ ಭಾಗವಹಿಸಬೇಕು. ಕಾಟಾಚಾರಕ್ಕೆ ಪಾಲ್ಗೊಳ್ಳಬಾರದು. ಕ್ರೀಡಾ ಕ್ಷೇತ್ರದಲ್ಲೂ ಸಾಧನೆ ಮಾಡಲು ಅವಕಾಶವಿದೆ. ಕೊಳ್ಳೇಗಾಲದ ಶ್ರೀ ಮಹದೇಶ್ವರ ಕಾಲೇಜು ಸುಂದರವಾದ ಮೈದಾನ ಹೊಂದಿದೆ. ಇದಕ್ಕೆ ಕಾರಣರಾದ ಮಾಜಿ ಶಾಸಕ ದಿ.ಎಸ್.ಜಯಣ್ಣ ಅವರನ್ನು ನಾವೆಲ್ಲರೂ ನೆನೆಯಬೇಕು. ಕ್ರೀಡಾಪಟುಗಳು ಮೈದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮೈದಾನ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನವನ್ನು ಸರ್ಕಾರ ನೀಡಿದೆ. ಮುಂದಿನ ದಿನಗಳಲ್ಲಿ ಜಿಮ್ ಕಟ್ಟಡ, ಸಿಂಥೆಟಿಕ್, ಬಾಸ್‌ಕೆಟ್ ಬಾಲ್‌ಕೋರ್ಟ್‌ಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಮಕ್ಕಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದರೆ ದೈಹಿಕ ಮತ್ತು ಮಾನಸಿಕವಾಗಿ ಸದೃಢತೆ ಕಾಪಾಡಿಕೊಳ್ಳಬಹುದು. ತಾಲೂಕು ಮಟ್ಟದಿಂದ ದೇಶವನ್ನು ಪ್ರತಿನಿಧಿಸುವ ರೀತಿಯಲ್ಲಿ ಕ್ರೀಡಾಪಟುಗಳು ಸಾಧನೆ ಮಾಡಬೇಕು ಎಂದರು.

ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ವಿಶ್ವ ಚೇತನ ಸಮೂಹ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲೂಕು ಅಧ್ಯಕ್ಷ ರಾಜೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ, ತಾಲೂಕು ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಎ.ಜೋಸೆಫ್ ಅಲೆಗ್ಸಾಂಡರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್, ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಪ್ರಿಯಾಶಂಕರ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಂ.ನಟೇಶ್ ಬಾಬು, ವಿಶ್ವ ಚೇತನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಭಾಸ್ಕರ್, ವಿಶ್ವ ಚೇತನ ವಿದ್ಯಾಸಂಸ್ಥೆ ವ್ಯವಸ್ಥಾಪಕ ರವೀಂದ್ರ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net