ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಇರಲಿ ; ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸಲಹೆ

01-GPT-1
Published on



ಚಾಮರಾಜನಗರ: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ದೃಢತೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳವಾರ ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು.


ತಾಲೂಕಿನ ಪ್ರತಿಭೆಗಳು ಬಾಲ್ಯದಿಂದಲೇ ಅಭ್ಯಾಸ ಮಾಡಿ ಪ್ರಾಥಮಿಕ ಶಾಲೆಗಳಲ್ಲಿ ಆಯೋಜಿಸುವ ಕ್ರೀಡೆಗಳಲ್ಲಿ ಭಾಗವಹಿದರೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಿ ತಾಲೂಕಿನ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಆಶಿಸಿದರು.


ಕ್ಷೇತ್ರಶಿಕ್ಷಣಾಧಿಕಾರಿ ರಾಜಶೇಖರ್, ಪುರಸಭೆ ಸದಸ್ಯ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಪ್ರಸಾದ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾಧ್ಯಕ್ಷೆ ಅನ್ನಪೂರ್ಣಮ್ಮ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಾಂತಮಲ್ಲೇಶ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ತಾಲೂಕಿನ 40 ಪ್ರಾಥಮಿಕ ಶಾಲೆಗಳ ಸುಮಾರು 600 ವಿದ್ಯಾರ್ಥಿಗಳು ವಾಲಿಬಾಲ್, ಥ್ರೋಬಾಲ್, ಕಬ್ಬಡ್ಡಿ, ಖೋಕೋ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net