ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಅವಶ್ಯ

29ydg03
Published on


ಯಾದಗಿರಿ: ಇಂದಿನ ಸ್ಪಧರ್ಾತ್ಮಕ ಯುಗದಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಹೆಚ್ಚಿನ ಅಂಕ ಗಳಿಸುವಂತೆ ಒತ್ತಡ ಹೇರುತ್ತಿದ್ದು, ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ತಿಳಿಸಿದರು.
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಜನ್ಮದಿನದ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಳಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಯುವಜನ ಹಾಗೂ ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆಯನ್ನು ಪಾಲಕರು ಗುರುತಿಸಬೇಕು. ಧ್ಯಾನ್ಚಂದ್ ಸತತ 3 ಬಾರಿ ಭಾರತ ಹಾಕಿಯಲ್ಲಿ ಚಿನ್ನದ ಪದಕ ಗೆದ್ದ ವಿಶ್ವಕಂಡ ಮಹಾನ್ ಕ್ರೀಡಾಪಟು. ವಿದ್ಯಾಥರ್ಿಗಳು ಅಂಥವರನ್ನು ಮಾದರಿಯಾಗಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಮಕ್ಕಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಗಳೂ ಅಷ್ಟೇ ಮುಖ್ಯ. ಕಾರಣ ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಗಟ್ಟಿಗೊಳಿಸುವಲ್ಲಿ ಸಹಕಾರಿಯಾಗಿವೆ. ಹೀಗಾಗಿ ಸಕರ್ಾರ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ ಮಾಡುತ್ತಿದೆ ಎಂದರು.
ಜಿಲ್ಲಾಕಾರಿ ಡಾ.ಸುಶೀಲಾ ಬಿ., ಮಾತನಾಡಿ, ಕ್ರೀಡೆ ಇಂದು ಅತ್ಯಂತ ಅವಶ್ಯಕವಾದ ಒಂದು ಚಟುವಟಿಕೆ. ಯುವಕರು ಗ್ರಾಮೀಣ ಕ್ರೀಡೆಗಳು ಮತ್ತು ಆಧುನಿಕ ಕ್ರೀಡೆಗಳನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ಮ್ಯಾರಥಾನ್ನಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ, ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ರಾಜು ಭಾವಿಹಳ್ಳಿ, ಬೂದಯ್ಯ ಹಿರೇಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net