ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ

Untitled design (5)
ಸಿರವಾರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ತಹಸೀಲ್ದಾರ್ ರವಿ ಎಸ್.ಅಂಗಡಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನೆ, ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ನಾಯಕ, ಶಿಕ್ಷಕರಾದ ಮೌನೇಶ ಹಿರೇಹಣಿಗಿ, ಎಸ್ಡಿಎಂಸಿ ಅಧ್ಯಕ್ಷೆ ತಾಯಮ್ಮ ಇದ್ದರು.
Published on

ಸಿರವಾರ: ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.


ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾತನಾಡಿದರು.

ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಸೋಲು ಗೆಲುವಿನ ಬೆಲೆ ತಿಳಿಯುತ್ತದೆ ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನೆ, ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ನಾಯಕ, ಶಿಕ್ಷಕರಾದ ಮೌನೇಶ ಹಿರೇಹಣಿಗಿ, ಬಸವರಾಜ ನಾಯಕ, ರಾಜಶೇಖರ ದಿನ್ನಿ, ಯೂನೂಸ್, ಹೇಮಣ್ಣ, ಶಿವಾಜಿ, ಶರಣಪ್ಪ, ಎಸ್ಡಿಎಂಸಿ ಅಧ್ಯಕ್ಷೆ ತಾಯಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net