ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ

IMG-20230903-WA0266
Published on

ಆಲೂರು: ಯುವಕರು ಪಾಠದ ಜತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಆಲೂರು-ಸಕಲೇಶಪುರದ ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಕೆ.ಹೊಸಕೋಟೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಪ್ರತಿಭೆಯನ್ನು ಹೊರಹಾಕುವಲ್ಲಿ ಕ್ರೀಡಾಕೂಟಗಳು ಪ್ರಮುಖ ಪಾತ್ರ ವಹಿಸುತ್ತದೆ. ಸತತ ಪ್ರಯತ್ನದ ಮೂಲಕ ಯಶಸ್ಸು ಲಭ್ಯವಾಗಲಿದೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಟೋಟಗಳಲ್ಲಿ ಭಾಗವಹಿಸಿ ಸಾಧಕರಾಗಬೇಕು ಎಂದರು.
ನಮ್ಮ ಕ್ಷೇತ್ರದಲ್ಲಿ ನಡೆಯುವ ಕ್ರಿಯಾಶೀಲ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.
ಅಬ್ಬನ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಕ್ರೀಡಾಕೂಟಗಳಿಂದ ಮಾನಸಿಕ ಮತ್ತು ಶಾರೀರಿಕ ಆರೋಗ್ಯ ದೊರೆಯುತ್ತದೆ. ಗ್ರಾಮೀಣ ಪ್ರದೇಶದಲ್ಲಿದ್ದರೂ ಕ್ರೀಡೆಯಲ್ಲಿ ಮಕ್ಕಳು ಸಾಧನೆ ಮಾಡಬೇಕು ಎಂದರು.
ಬಿಜೆಪಿ ಹಿರಿಯ ಮುಖಂಡ ನಾಗರಾಜ್ ಕಟ್ಟೆಗದ್ದೆ ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸಮಗ್ರ ವಿಕಾಸವಾಗುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವೆಂಕಟೇಶ್, ಮುಖ್ಯ ಶಿಕ್ಷಕ ರಾಜಯ್ಯ,ಬಿಆರ್‌ಸಿ ರವಿ, ಅಶ್ವಥ್, ಮುಖ್ಯ ಶಿಕ್ಷಕ ಶಿವಕುಮಾರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net