

ನಾಪೋಕ್ಲು: ಅಧ್ಯಯನದೊಂದಿಗೆ ಪಠ್ಯೇತರ ಚಟುವಟಿಕೆಗೂ ಗಮನ ಹರಿಸಿ ಎಂದು ನಿವೃತ್ತ ಬಿಆರ್‌ಸಿ ನಳಿನಿ ಪೂವಯ್ಯ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಚೇರಂಬಾಣೆ ಕ್ಲಸ್ಟರ್‌ನಲ್ಲಿ ಗುರುವಾರ ಕೊಟ್ಟೂರಿನ ರಾಜ ರಾಜೇಶ್ವರಿ ವಿದ್ಯಾ ಸಂಸ್ಥೆಯಲ್ಲಿ ಅಯೋಜಿಸಿದ್ದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಶಿಕ್ಷಣ ಇಲಾಖೆ ಈ ರೀತಿಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳುತ್ತಿದೆ. ಶಿಕ್ಷಕರು, ಪಾಲಕರು ಬೆಂಬಲಿಸಬೇಕು ಎಂದರು.
14 ಶಾಲೆಗಳ 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿದರು. ವಿದ್ಯಾ ಸಂಸ್ಥೆ ಕಾರ್ಯದರ್ಶಿ ನಾಟೋಳಟಡ ವಿಜು, ಚೇರಂಬಾಣೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪಟ್ಟಮಾಡ ಮಿಲನಾ ಮುತ್ತಣ್ಣ , ಸಂಪನ್ಮೂಲ ವ್ಯಕ್ತಿ ವೀಣಾ ರೈ, ಮುಖ್ಯ ಶಿಕ್ಷಕ ಕುದುಪಜೆ ಕವನ್ ಕುಮಾರ್, ರೋಸಮ್ಮ, ಬಾಲೆಯಡ ದಿವ್ಯಾ ಇತರರು ಹಾಜರಿದ್ದರು.