ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಿ

IMG-20250517-WA0599
Published on

ಅರಸೀಕೆರೆ ಗ್ರಾಮಾಂತರ: ವಿದ್ಯಾರ್ಜನೆ ಜತೆಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಂಡವರು ಸಾರ್ವಜನಿಕ ಬದುಕಿನಲ್ಲಿ ಯಶಸ್ಸು ಕಾಣುತ್ತಾರೆ ಎಂದು ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ಜಿ.ಬಿ. ಶಶಿಧರ್ ಹೇಳಿದರು.

ಹೊಯ್ಸಳೇಶ್ವರ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್, ಸ್ಕೌಟ್ ಆ್ಯಂಡ್ ಗೈಡ್ ಕ್ರೀಡಾ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.

ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಿರಿಯೂರು ರೇವಣ್ಣ ಮಾತನಾಡಿ, ನಮ್ಮ ಹೊಯ್ಸಳೇಶ್ವರ ಕಾಲೇಜು ಒಂದಲ್ಲಾ ಒಂದು ರೀತಿಯಲ್ಲಿ ವಿದ್ಯಾರ್ಥಿಗಳು ತಾಲೂಕು ಜಿಲ್ಲಾ ಮಟ್ಟದಲ್ಲಿ ಗಣನೀಯ ಸಾಧನೆ ಮಾಡಿರುವುದು ನಮ್ಮ ತಾಲೂಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು.

ಅಜ್ಜಂಪುರ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಆನಂದ್ ಮಾತನಾಡಿ, ಇಂದಿನ ಮಕ್ಕಳು ಮೊಬೈಲ್ ಹಾಗೂ ಟಿ.ವಿ. ಹವ್ಯಾಸಗಳಿಂದ ದೂರ ಇದ್ದು, ಉತ್ತಮ ವಿದ್ಯಾಭ್ಯಾಸದ ಕಡೆ ಹೋದಾಗ ಬದುಕು ಉಜ್ವಲವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಕಿವಿಮಾತು ಹೇಳಿದರು.

ತಾಲೂಕು ಪದವಿಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಲಹಾ ಸಮಿತಿ ಸದಸ್ಯರಾದ ಮಹಾಲಿಂಗಪ್ಪ, ಶಶಿವಾಳ ಗಂಗಾಧರ್, ವೀರಭದ್ರಪ್ಪ, ನಗರಸಭಾ ಆಯುಕ್ತ ಕೃಷ್ಣಮೂರ್ತಿ, ನಗರ ವೃತ್ತ ನಿರೀಕ್ಷಕ ರಾಘವೇಂದ್ರರಾವ್, ಹೊಯ್ಸಳೇಶ್ವರ ಕಾಲೇಜಿನ ಪ್ರಾಂಶುಪಾಲ ವಸಂತಕುಮಾರ್, ಉಪನ್ಯಾಸಕರಾದ ಶಶಿಕುಮಾರ್, ಮಂಜುನಾಥ್, ಪೂರ್ಣಿಮಾ, ರೂಪಾ, ಮೇಘಾ, ಪೂಜಾ, ಪಾರ್ವತಮ್ಮ, ಸಯ್ಯದ್ ಆಯೂಬ್, ಹಾಗೂ ಕಾಲೇಜಿನ ಬೋಧಕೇತರ ವರ್ಗ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net