ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಕಾಶ

Shantagouda Gunaki
Published on

ಕಲಬುರಗಿ: ಪಡಿತರ ಚೀಟಿ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಆ.೨೪ರಂದು ಬೆಳಗ್ಗೆ ೧೦ರಿಂದ ಸಂಜೆ ೪ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆ ಉಪ ನಿರ್ದೇಶಕ ಶಾಂತಪ್ಪ ಗುಣಕಿ ತಿಳಿಸಿದ್ದಾರೆ.
ಸೆ.೧ರಿಂದ ಸೆ.೧೦ರವರೆಗೆ ನಿತ್ಯ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ತಿದ್ದುಪಡಿ, ಸೇರ್ಪಡೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net