ಕೊರಟಗೆರೆ: ಪತ್ನಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಾಲೂಕಿನ ಸಿ.ಎನ್.ದುರ್ಗಾ ಹೋಬಳಿ ಥರಟಿ ಗ್ರಾಮದ ದೇವರಾಜು ಎಂಬಾತನಿಗೆ ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಏನಿದು ಪ್ರಕರಣ: ತಾಲೂಕಿನ ಸಿ.ಎನ್. ದುರ್ಗಾ ಹೋಬಳಿ ಥರಟಿ ಗ್ರಾಮದ ಯಶೋದಾ ಮತ್ತು ಆಕೆಯ ಪತಿ ದೇವರಾಜು ನಡುವೆ ಆಗಾಗ್ಗೆ ಜಗಳ ನಡೆಯಿತ್ತಿತ್ತು. ಯಶೋದಾ ಮೇಲೆ ಅನುಮಾನಪಡುತ್ತಿದ್ದ ಪತಿ ದೇವರಾಜು 2021 ಮಾರ್ಚ್ 10 ರಂದು ಅಡುಗೆ ಮಾಡುತ್ತಿದ್ದಾಗ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆ ಸಿಪಿಐ ಸಿದ್ದರಾಮೇಶ್ವರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಲಯದ ನ್ಯಾಯಾಧೀಶ ಯಾದವ ಕರಕೇರ ಆರೋಪಿ ದೇವರಾಜುವಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದ್ದು,
ದಂಡದ ಪೂರ ಹಣವನ್ನು ಮೃತಳ ಮಕ್ಕಳಾದ ಅಕ್ಷತಾ ಮತ್ತು ಲಿಖಿತ್ ಅವರಿಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ. ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಂ.ನಿರಂಜನಮೂರ್ತಿ ವಾದ ಮಂಡಿಸಿದ್ದರು.
ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೋಕ್ಸೋ ಪ್ರಕರಣದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ತುಮಕೂರು ಎಫ್ಟಿಎಸ್ಸಿ -1ನೇ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. 2020 ಏ.3ರಂದು ನೊಂದ ಬಾಲಕಿಯ ತಾಯಿ, ಕೋಡಿಹಳ್ಳಿಯರು(29) ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ ಶಿೆ ಪ್ರಮಾಣ ಪ್ರಕಟಿಸಿದೆ. ಮಹಿಳಾ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ನವೀನ್ಕುಮಾರ್ ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.