

ಸವದತ್ತಿ: ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರಿಗೆ ಅವಾಚ್ಯ ಪದ ಬಳಸಿದ್ದಲ್ಲದೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸವದತ್ತಿ ತಾಲೂಕು ಪತ್ರಕರ್ತರ ಸಂಘದಿಂದ ಬುಧವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರ ಕಾರ್ಯವನ್ನು ಶ್ಲಾಸಿರುವ ರಾಜ್ಯ ಸರ್ಕಾರ ್ರಂಟ್‌ಲೈನ್ ವಾರಿಯರ್ಸ್ ಎಂದು ಘೋಷಿಸಿದೆ. ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಪತ್ರಕರ್ತರನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಖಂಡನಾರ್ಹ ಎಂದು ಮನವಿ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲ ಇಲಾಖೆಗಳೊಂದಿಗೆ ಜತೆಗೂಡಿ ಪತ್ರಿಕಾ ರಂಗ ಕಾರ್ಯ ನಿರ್ವಹಿಸುತ್ತಿದೆ. ಕಟ್ಟಕಡೆಯ ವ್ಯಕ್ತಿಗೆ ಪತ್ರಿಕೆ ಮೂಲಕ ಎಲ್ಲ ಮಾಹಿತಿ ನೀಡುವ ಜವಾಬ್ದಾರಿ ನಮ್ಮದಾಗಿದೆ. ಪತ್ರಕರ್ತರ ಕಾರ್ಯಕ್ಕೆ ಅಡ್ಡಿ ಪಡಿಸದೆ ಸಹಕಾರ ನೀಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಕೂಡಲೇ ಸಿಪಿಐ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಬಿ.ಎಂ. ಶಿರಸಂಗಿ, ಬಾಲಕೃಷ್ಣ ಮಿರಜಕರ್, ಡಿ.ಎಸ್.ಕೊಪ್ಪದ, ಮಹೇಶ ಮಿರಜಕರ್, ಕೀರಪ್ಪ ಸಂಗಪ್ಪನವರ, ಐ.ಎಂ.ಣಿಬಂದ್, ನಂದಕುಮಾರ ಚಂದರಗಿ, ಮಂಜುನಾಥ ಜಗದಾರ ಇತರರು ಇದ್ದರು.