ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಚಾಲನೆ

21kglphoto 2
Published on

ಕೊಳ್ಳೇಗಾಲ: ನಗರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಸಂಸದ ವಿ.ಶ್ರೀನಿವಾಸಪ್ರಸಾದ್ ಮತ್ತು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಭೂಮಿಪೂಜೆ ನೆರವೇರಿಸಿದರು.

ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ಕೊಳ್ಳೇಗಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪದಾಧಿಕಾರಿಗಳು ಸಂಘದ ಕಚೇರಿ ನಿರ್ಮಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಮೊದಲಿಗೆ ಶಾಸಕ ಎನ್.ಮಹೇಶ್ ಕಟ್ಟಡ ನಿರ್ಮಾಣಕ್ಕಾಗಿ 5 ಲಕ್ಷ ರೂ. ಅನುದಾನ ನೀಡಿದ್ದಾರೆ. ನಾನು ಸಹ ಇನ್ನೆರಡು ದಿನದಲ್ಲಿ ಸಂಸದರ ನಿಧಿಯಿಂದ 5 ಲಕ್ಷ ರೂ. ನೀಡುತ್ತೇನೆ. ಚುನಾವಣೆ ಬಳಿಕ 5 ಲಕ್ಷ ರೂ. ಕೊಡುತ್ತೇನೆ. ಪತ್ರಕರ್ತರ ಅನುಕೂಲಕ್ಕೆ ಸುಸಜ್ಜಿತವಾದ ಭವನ ನಿರ್ಮಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಶಾಸಕ ಎನ್.ಮಹೇಶ್ ಮಾತನಾಡಿ, ನೂತನ ಕಟ್ಟಡದಲ್ಲಿ ಸುದ್ದಿಗೋಷ್ಠಿ ಜತೆಗೆ ಕವಿಗೋಷ್ಠಿಯಂತಹ ಕಾರ್ಯಕ್ರಮಗಳು ನಡೆಯಲು ಸ್ಥಳಾವಕಾಶ ಕಲ್ಪಿಸಬೇಕು. ಇಲ್ಲಿನ ವಾತಾವರಣ ಪರಿಸರ ಸ್ನೇಹಿಯಾಗಿದೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ಇವೆಲ್ಲವನ್ನು ನೋಡಿಕೊಂಡು ಕಟ್ಟಡ ನಿರ್ಮಿಸಬೇಕು ಎಂದು ತಿಳಿಸಿದರು.
ಸದಕ್ಕೆ 5 ಲಕ್ಷ ರೂ. ಅನುದಾನ ನೀಡಿದ್ದೇನೆ. ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಪೂರ್ಣಗೊಳಿಸಲು ಬೇರೆಡೆಯಿಂದಲೂ ಅನುದಾನ ಕೊಡಿಸುವುದರ ಜತೆಗೆ ವೈಯಕ್ತಿಕವಾಗಿಯೂ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ನಗರಸಭಾ ಸದಸ್ಯ ಪ್ರಕಾಶ್ ಶಂಕನಪುರ, ಕವಿತಾ, ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ, ಪ್ರಧಾನ ಕಾರ್ಯದರ್ಶಿ ಗೌಡಳ್ಳಿ ಮಹೇಶ್, ನಂದೀಶ್, ಹಿರಿಯ ಪತ್ರಕರ್ತ ಎ.ಎಚ್.ಗೋವಿಂದ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷ ಮರಿಸ್ವಾಮಿ, ಕಾರ್ಯದರ್ಶಿ ಸೋಮು, ಸದಸ್ಯರಾದ ಡಿ. ನಟರಾಜು, ರಾಜೇಶ್, ಬಸಂತ್, ರಾಜು, ಅವಿನ್, ಯೂನುಸ್, ಪ್ರೇಮ್ ಸಾಗರ್, ಪವನ್ ಕುಮಾರ್, ವಸಂತ್, ಮಹೇಶ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net