ಪತ್ರಕರ್ತರ ಸಂಘದಿಂದ ಶ್ರೀಗಳಿಗೆ ಶ್ರದ್ಧಾಂಜಲಿ

23_HSN_13
Published on

ಹಾಸನ: ಶ್ರವಣಬೆಳಗೊಳ ಜೈನ ಮಠಾಧೀಶ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಬಾಳ್ಳು ಗೋಪಾಲ್ ಸೇರಿದಂತೆ ಎಲ್ಲ ಪದಾಧಿಕಾರಿಗಳು ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಬಳಿಕ ಮಾತನಾಡಿದ ಶಿವಾನಂದ ತಗಡೂರು, ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಗಲಿಕೆ ಎಲ್ಲರಿಗೂ ತುಂಬಲಾರದ ನಷ್ಟ. ಎಲ್ಲ ಜಾತಿ, ಧರ್ಮಗಳನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಗೊಮ್ಮಟನಂತೆಯೇ ಮೇರು ವ್ಯಕ್ತಿತ್ವ ಹೊಂದಿದ್ದ ಸ್ವಾಮೀಜಿ ಪತ್ರಕರ್ತರಿಗೆ ಎಲ್ಲ ರೀತಿಯ ಸಹಕಾರ ನೀಡಿದ್ದರು ಎಂದು ಸ್ಮರಿಸಿದರು.
ಜಿಲ್ಲಾಧ್ಯಕ್ಷ ಬಾಳ್ಳು ಗೋಪಾಲ್ ಮಾತನಾಡಿ, ಪತ್ರಕರ್ತರ ಸಂಘದ ಕಾರ್ಯಕ್ರಮಗಳಿಗೆ ಸ್ವಾಮೀಜಿ ಅನುದಾನ ನೀಡುತ್ತಿದ್ದರು. ಅವರ ನಿಧನದ ಸುದ್ದಿ ಇಡೀ ಜಿಲ್ಲೆ ಸೇರಿದಂತೆ ರಾಜ್ಯ, ರಾಷ್ಟ್ರಕ್ಕೆ ತುಂಬ ನಷ್ಟವಾಗಿದೆ. ಅವರ ಅಗಲಿಕೆ ಭಕ್ತಗಣಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು, ಪ್ರಧಾನ ಕಾರ್ಯದರ್ಶಿ ಮಂಜು ಬನವಾಸೆ, ಉಪಾಧ್ಯಕ್ಷ ನಂಜುಂಡೇಗೌಡ, ವೇಣುಕುಮಾರ್, ಕಾರ್ಯದರ್ಶಿ ನಟರಾಜ್, ಸೇರಿದಂತೆ ಎಲ್ಲ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net