ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಕಾರ್ಯಾಗಾರ

29 vpt 2
Published on

ವಿರಾಜಪೇಟೆ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಇತ್ತೀಚೆಗೆ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಸಾಹಿತಿ ರಜಿತ ಕಾರ್ಯಪ್ಪ ಕಾರ್ಯಾಗಾರದಲ್ಲಿ ಸಾಹಿತ್ಯಾಭಿರುಚಿ ಕುರಿತು ಮಾತನಾಡಿದರು. ಇದೇ ಸಂದರ್ಭ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ನಿರ್ದೇಶಕರಾದ ಮಮತಾ ಅರಸೀಕೆರೆ, ಪ್ರೊ.ಎಂ.ಅಬ್ದುಲ್ ರೆಹಮಾನ್ ಪಾಷಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net