

ಯಾದಗಿರಿ: ಪತ್ರಿಕೋದ್ಯಮ ಸಮಾಜದ ೪ನೇ ಅಂಗವಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರ ಕೊಡುಗೆ ಅಪಾರವಾಗಿದೆ. ಧ್ವನಿ ಇಲ್ಲದವರ ಪರವಾಗಿ ಪತ್ರಕರ್ತರು ನಿಲ್ಲಬೇಕು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಹೇಳಿದರು.
ಜಿ¯್ಲÁ ಕಾರ್ಯನಿರತ ಪತ್ರಕರ್ತರ ಸಂಘದಿAದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡ ಜಿ¯್ಲÁ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಜನರ ಸಮಸ್ಯೆಗಳ ಕುರಿತು ವರದಿ ಮಾಡುವ ಮೂಲಕ ಪತ್ರಕರ್ತರು ಸಮಾಜದ ಬೆನ್ನೆಲುಬಾಗಿz್ದÁರೆ. ವೈಯುಕ್ತಿಕ ಜೀವನ ಬದಿಗಿಟ್ಟು ನಿತ್ಯ ಕೆಲಸ ಮಾಡುತ್ತಾರೆ. ಅವರ ಸೇವೆ ಅನನ್ಯವಾಗಿದೆ ಎಂದರು.
ಡಿಡಿಯು ಶಿP್ಷÀಣ ಸಂಸ್ಥೆಗಳ ಸಂಸ್ಥಾಪಕ ಅಧ್ಯP್ಷÀ ಡಾ.ಭೀಮಣ್ಣ ಮೇಟಿ ಮಾತನಾಡಿ, ಪತ್ರಕರ್ತರು ಯಾವಾಗಲೂ ಸತ್ಯದ ಪರವಾಗಿರಬೇಕಿದೆ. ಇದರಿಂದಾಗಿ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು. ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಾಮನಿ ಮಾತನಾಡಿ, ಪತ್ರಕರ್ತರು ಜನರ ಸಮಸ್ಯೆಗಳ ಮೇಲೆ ಬೆಳಕು ಚಲ್ಲುವಂತಹ ವರದಿ ಮಾಡಿದಾಗ ನನಗೆ ಆ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿ, ಶೀಘ್ರದಲ್ಲಿಯೇ ಜಿ¯್ಲÁ ಕೇಂದ್ರದ ೩೬ ಜನ ಪತ್ರಕರ್ತರಿಗೆ ನಗರಸಭೆಯಿಂದ ನಿವೇಶನ ಮಂಜೂರು ಆಗಲಿದೆ. ಬಹುದಿನಗಳ ಬೇಡಿಕೆ ಈಡೇರಲಿದೆ ಎಂದು ಹೇಳಿದರು.
ಸಂಘದ ಉಪಾಧ್ಯP್ಷÀ ಹಾಗೂ ಜಿ¯್ಲÁ ಉಸ್ತುವಾರಿ ಭವಾನಿಸಿಂಗ್ ಠಾಕೂರ ಮಾತನಾಡಿದರು. ಸಂಘದ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಾರ್ತಾ ಇಲಾಖೆಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿಯಾದ ಗುರುನಾಥ ಅವರಿಗೆ ಸಂಘದಿAದ ಸನ್ಮಾನಿಸಲಾಯಿತು. ಪ್ರಾಥಮಿಕ ಶಾಲಾ ಶಿP್ಷÀಕರ ಸಂಘದ ಜಿ¯್ಲÁಧ್ಯP್ಷÀ ರಾಘವೇಂದ್ರ ಅಳ್ಳಳ್ಳಿ, ಜೆಡಿಎಸ್ ಯುವ ಮುಖಂಡ ಬಂದಪ್ಪ ಅರಳಿ, ಸಂಘದ ಜಿ¯್ಲÁ ಪ್ರಧಾನ ಕಾರ್ಯದರ್ಶಿ ಮಹೇಶ್ ಕಲಾಲ್ ಇದ್ದರು. ಪತ್ರಕರ್ತ ನರಸಪ್ಪ ನಾರಾಯಣನೋರ್ ಸ್ವಾಗತಿಸಿದರು. ವಿಶಾಲಕುಮಾರ ಶಿಂಧೆ ವಂದಿಸಿದರು.