ಪತ್ರಿಕಾ ದಿನಾಚರಣೆ 13ಕ್ಕೆ

Newspapers that retain credibility
Published on

ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಜಿಪಂ ಸಭಾಂಗಣದಲ್ಲಿ ಜು. 13ರಂದು ಬೆಳಗ್ಗೆ 10.30ಕ್ಕೆ ‘ಪತ್ರಿಕಾ ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಎಂ. ಕಾರಜೋಳ, ರಾಜ್ಯ ವಕ್ಫೃ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ಎಂಎಲ್ಸಿಗಳಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಅತಿಥಿಗಳಾಗಿ ಭಾಗವಹಿಸುವರು.

ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್‌ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಅತಿಥಿಗಳಾಗಿ ಭಾಗವಹಿಸುವರು.

ಹಿರಿಯ ಪತ್ರಕರ್ತ ರವಿ ಹೆಗಡೆ ದಿಕ್ಸೂಚಿ ಭಾಷಣ ಮಾಡುವರು. ಪತ್ರಕರ್ತರು, ಸಂವಿಧಾನ ಮತ್ತು ಸಾಮಾಜಿಕ ನ್ಯಾಯ ಎಂಬ ವಿಷಯದ ಕುರಿತು ಕವಿ ಬಂಜೆಗೆರೆ ಜಯಪ್ರಕಾಶ್ ಉಪನ್ಯಾಸ ನೀಡುವರು ಎಂದು ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಸಂಪಾದಕರ ಸಂಘದ ಅಧ್ಯಕ್ಷ ರವಿ ಮಲ್ಲಾಪುರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net