ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಣೆ

hawkers.jpg
Published on

ದಾವಣಗೆರೆ : ಎಸ್.ಎಸ್.ಎಂ. ಅಭಿಮಾನಿ ಬಳಗದಿಂದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ 56ನೇ ಜನ್ಮದಿನದ ಪ್ರಯುಕ್ತ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರಿಗೆ ಜರ್ಕಿನ್‌ಗಳನ್ನು ವಿತರಿಸಲಾಯಿತು.
 ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಿಸಿ ಮಾತನಾಡಿ, ಸಚಿವ ಮಲ್ಲಿಕಾರ್ಜುನ್ ಅವರು ಜನಾನುರಾಗಿ ನಾಯಕರಾಗಿದ್ದು ಸೇವಾ ಗುಣವೇ ಅವರನ್ನು ಅಧಿಕಾರಕ್ಕೆ ತಂದಿದೆ. ಅವರ ಸೇವೆ ಯಾವಾಗಲೂ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತೆ ಮಾಡುವುದಾಗಿ ಹೇಳಿದರು.
 ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ, ಮಲ್ಲಿಕಾರ್ಜುನ್ ಅವರು ಶಾಸಕರಾಗಿ, ಸಚಿವರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತ ಬಂದಿದ್ದು, ದೇವರು ಅವರಿಗೆ ಜನಸೇವೆ ಮಾಡುವ ಇನ್ನಷ್ಟು ಶಕ್ತಿ ನೀಡಲಿ ಎಂದು ಆಶಿಸಿದರು.
 ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಉಪ ಆಯುಕ್ತೆ ಲಕ್ಷ್ಮೀ, ಎಸ್.ಎಸ್.ಎಂ. ಅಭಿಮಾನಿ ಬಳಗದ ಅಯೂಬ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿ ಎಸ್. ಮಲ್ಲಿಕಾರ್ಜುನ್, ಕಾಂಗ್ರೆಸ್ ಪಕ್ಷದ ಮುಖಂಡರು, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net