

ಚಿತ್ರದುರ್ಗ:ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದ ವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ನವೆಂಬರ್8ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯ ಡಿ ನೀಡುವ ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿ ಅವಧಿ ಮಾಸಿಕ 15 ಸಾವಿರ ರೂ.ಸ್ಟೈಫೆಂಡ್ ನೀಡಲಾಗುವುದು. ತರಬೇತಿ 2025 ಜನವರಿಯಿಂದ ಆರಂಭವಾಗಲಿದೆ. ಆಸಕ್ತರು ಅರ್ಜಿ ನಮೂ ನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ,ವಾರ್ತಾ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಆವರಣ ಇವರನ್ನು ಸಂಪರ್ಕಿಸ ಬಹು ದೆಂದು ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ತಿಳಿಸಿದ್ದಾರೆ.