ಪದಗ್ರಹಣ, ಆರೋಗ್ಯ ಶಿಬಿರ 16ರಂದು

anand varik
Published on

ಕಲಬುರಗಿ: ಸವಿತಾ ಸಮಾಜದ ನೂತನ ಜಿಲ್ಲಾಧ್ಯಕ್ಷ ಸೇರಿ ಪದಾಧಿಕಾರಿಗಳ ಪದಗ್ರಹಣ, ಬಡವರಿಗಾಗಿ ಉಚಿತ ಆರೋಗ್ಯ ಶಿಬಿರ ಮತ್ತು ಉಚಿತ ಶ್ರಮ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ಜು.೧೬ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಆನಂದ ವಾರಿಕ್ ತಿಳಿಸಿದರು.

ಜಿಲ್ಲಾಧ್ಯಕ್ಷನಾಗಿ ಅವಿರೋಧ ಆಯ್ಕೆಯಾಗಿದ್ದು, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಈಶ್ವರ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಜು.೧೬ರಂದು ಬೆಳಗ್ಗೆ ೧೧ಕ್ಕೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಮನ್ನೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಆರೋಗ್ಯ ಉಚಿತ ತಪಾಸಣೆ ಶಿಬಿರ, ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ ನೇತ್ರ ಉಚಿತ ತಪಾಸಣೆ, ಶಸ್ತç ಚಿಕಿತ್ಸೆ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶ್ರಮ ಕಾರ್ಡ್, ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಹಮ್ಮಿಕೊಳ್ಳಲಾಗಿದೆ. ಜಿ¯್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಹ್ವಾನಿಸಲಾಗಿದೆ. ಸವಿತಾ ಪೀಠದ ಪೀಠಾಧಿಪತಿ ಸವಿತಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಸ್ಥಳೀಯ ಮಠಾಧೀಶರು ಭಾಗವಹಿಸಲಿದ್ದಾರೆ. ವಿವಿಧ ಸಮಾಜಗಳ ಜಿಲ್ಲಾಧ್ಯಕ್ಷರು, ವಿವಿಧ ಕಾಯಕ ಸಮಾಜದ ಪ್ರಮುಖರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪ್ರಮುಖರಾದ ವಿದ್ಯಾಸಾಗರ, ಅಶೋಕ ಮಾನೆ, ಸೂರ್ಯಕಾಂತ ಬೆಣ್ಣೂರ, ಜ್ಯೋತಿ ಆಡಕಿ, ಅಂಬು ರೋಜಾ, ಪೂಜಾ ಮಾನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net